ಭದೋಹಿ : 16 ವರ್ಷದ ಬಾಲಕಿಯ ಮೇಲೆ ಮೂವರು ಬಾಲಕರು ಅತ್ಯಾಚಾರವೆಸಗಿದ್ದು, ಕೃತ್ಯದ ವಿಡಿಯೊ ಚಿತ್ರೀಕರಿಸಿ ಅಂತರ್ಜಾಲದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದೋಹಿ : 16 ವರ್ಷದ ಬಾಲಕಿಯ ಮೇಲೆ ಮೂವರು ಬಾಲಕರು ಅತ್ಯಾಚಾರವೆಸಗಿದ್ದು, ಕೃತ್ಯದ ವಿಡಿಯೊ ಚಿತ್ರೀಕರಿಸಿ ಅಂತರ್ಜಾಲದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 1ರಂದು ಬಾಲಕಿ ಮನೆ ಪಕ್ಕದ ಅಂಗಡಿಗೆ ಹೋಗಿದ್ದ ವೇಳೆ ಮೂವರು ಬಾಲಕರು ಅವಳನ್ನು ಬಲವಂತವಾಗಿ ಕೋಣೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ.
ಮತ್ತೆ ಅಂಗಡಿಗೆ ಬರುವಂತೆ ಬಾಲಕಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ. ಬಾಲಕಿ ಬರಲು ಒಪ್ಪದಿದ್ದಾಗ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ತಿಳಿದ ಸಂತ್ರಸ್ತೆಯ ಕುಟುಂಬದವರು ಮೂವರು ಬಾಲಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಮೂವರು ಬಾಲಕರು 15 ರಿಂದ 17 ವರ್ಷದೊಳಗಿನವರು ಎಂದು ಸಿಂಗ್ ಹೇಳಿದ್ದಾರೆ.