ನವದೆಹಲಿ: 'ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ತಯಾರಿಕೆಯಲ್ಲಿ ಭಾರತವು ಮುಂಚೂಣಿ ಸ್ಥಾನಕ್ಕೇರಲು ಅಗತ್ಯವಿರುವ ಎಲ್ಲಾ ಕ್ರಮಕೈಗೊಳ್ಳಲು ಸರ್ಕಾರ ಸಿದ್ಧವಿದೆ' ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಸಚಿವರಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ತಂತ್ರಜ್ಞಾನ ಮತ್ತು ಡಿಜಿಟಲ್ ವ್ಯವಸ್ಥೆಗೆ ಉತ್ತೇಜನ ನೀಡುವ ಮೂಲಕ ಜನರ ಜೀವನಮಟ್ಟದ ಸುಧಾರಣೆಗೆ ಅನುಕೂಲಕರ ವಾತಾವರಣ ಕಲ್ಪಿಸಲಾಗುವುದು' ಎಂದರು.