ಬದಿಯಡ್ಕ: ಎಡನಿರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಳೆದ ಅಧ್ಯಯನ ವರ್ಷದ ಎಸ್ಸೆಸ್ಸೆಲ್ಸಿ ಹಾಗೂ ಪ್ಲಸ್ ಟು ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲಿ ಎ ಪ್ಲಸ್ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಎಡನೀರು ಶ್ರೀ ಭಾರತೀ ಕಲಾಸದನದಲ್ಲಿ ಜರುಗಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಸಮಾರಂಬ ಉದ್ಘಾಟಿಸಿದರು. ಶಾಸಕ ಎನ್. ಎ. ನೆಲ್ಲಿಕುನ್ನು ವಿಜೇತ ವಿದ್ಯಾರ್ಥಿಗಳಿಗೆ ಸ್ಮರಣಿಕೆ ವಿತರಿಸಿದರು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಾಚನ ನೀಡಿದರು. ಕಣ್ಣೂರು ವಿಶ್ವ ವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಖಾದರ್ ಮಾಂಗಾಡ್, ಜಿಲ್ಲಾ ಪಂಚಾಯತ್ ಸದಸ್ಯೆ ಶೈಲಜಾ ಭಟ್, ಚೆಂಗಳ ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಪ್ರಾಂಶುಪಾಲ ಪ್ರಭಾಕರನ್ ಸ್ವಾಗತಿಸಿದರು. ಅಧ್ಯಾಪಕ ಡಾ. ಗೋಪೇಶ್ ಜಿ. ಕೆ. ವಂದಿಸಿದರು.