HEALTH TIPS

ಪರೀಕ್ಷಾ ಪ್ರಕ್ರಿಯೆಯಲ್ಲಿ ಸುಧಾರಣೆ: ರಾಧಾಕೃಷ್ಣನ್‌ ನೇತೃತ್ವದಲ್ಲಿ ಸಮಿತಿ

             ವದೆಹಲಿ (ಪಿಟಿಐ): ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕ ಮತ್ತು ನ್ಯಾಯೋಚಿತವಾಗಿ ನಡೆಸಲು ಹಾಗೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಕಾರ್ಯವಿಧಾನವನ್ನು ಸಮಗ್ರವಾಗಿ ಪರಿಶೀಲಿಸಲು ಕೇಂದ್ರ ಸರ್ಕಾರವು ಇಸ್ರೊ ಮಾಜಿ ಮುಖ್ಯಸ್ಥ ಕೆ. ರಾಧಾಕೃಷ್ಣನ್‌ ನೇತೃತ್ವದಲ್ಲಿ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ.

            ದೆಹಲಿಯ ಏಮ್ಸ್‌ನ ಮಾಜಿ ನಿರ್ದೇಶಕ ರಣದೀಪ್‌ ಗುಲೇರಿಯಾ, ಹೈದರಾಬಾದ್‌ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಬಿ.ಜೆ.ರಾವ್‌, ಐಐಟಿ ಮದ್ರಾಸ್‌ನ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಕೆ. ರಾಮಮೂರ್ತಿ, 'ಪೀಪಲ್‌ ಸ್ಟ್ರಾಂಗ್‌'ನ ಸಹ ಸಂಸ್ಥಾಪಕ ಮತ್ತು ಕರ್ಮಯೋಗಿ ಭಾರತ್‌ ಮಂಡಳಿಯ ಸದಸ್ಯ ಪಂಕಜ್‌ ಬನ್ಸಾಲ್‌, ಐಐಟಿ ದೆಹಲಿ ವಿದ್ಯಾರ್ಥಿ ವ್ಯವಹಾರಗಳ ಡೀನ್‌ ಆದಿತ್ಯ ಮಿತ್ತಲ್‌, ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಗೋವಿಂದ್‌ ಜೈಸ್ವಾಲ್‌ ಸಮಿತಿಯ ಸದಸ್ಯರಾಗಿದ್ದಾರೆ.

              'ಪಾರದರ್ಶಕ, ನಕಲು ರಹಿತ ಮತ್ತು ಲೋಪ ಮುಕ್ತ ಪರೀಕ್ಷೆಗಳನ್ನು ನಡೆಸಬೇಕು ಎಂಬುದು ನಮ್ಮ ಬದ್ಧತೆಯಾಗಿದೆ. ಈ ನಿಟ್ಟಿನಲ್ಲಿ ಶಿಫಾರಸುಗಳನ್ನು ಮಾಡಲು ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿನ ದಕ್ಷತೆಯನ್ನು ಹೆಚ್ಚಿಸಲು, ಸಂಭವನೀಯ ದುಷ್ಕೃತ್ಯವನ್ನು ತಡೆಯಲು, ದತ್ತಾಂಶ ಭದ್ರತೆಯನ್ನು ಬಲಪಡಿಸಲು ಸಮಿತಿ ಶಿಫಾರಸುಗಳನ್ನು ಮಾಡಲಿದೆ. ಅಲ್ಲದೆ, ಎನ್‌ಟಿಎ ಅನ್ನು ಕೂಲಂಕಷವಾಗಿ ಪರಿಶೀಲಿಸಿ, ಅದರ ಸುಧಾರಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಮಿತಿ ತಿಳಿಸಲಿದೆ' ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ತಿಳಿಸಿದರು.

              ಸಮಿತಿ ರಚನೆಯ ಕುರಿತು ಪ್ರಧಾನ್‌ ಅವರು ಘೋಷಿಸಿದ ಎರಡು ದಿನಗಳ ಬಳಿಕ ಸಚಿವಾಲಯ ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಎರಡು ತಿಂಗಳೊಳಗೆ ಸಮಿತಿ ವರದಿ ನೀಡಬೇಕು ಎಂದು ತಿಳಿಸಿದೆ.

ಸಮಿತಿಗೆ ವಹಿಸಿರುವ ಪ್ರಮುಖ ಕಾರ್ಯಗಳು:

* ಪರೀಕ್ಷಾ ಕಾರ್ಯವಿಧಾನ, ದತ್ತಾಂಶ ಭದ್ರತೆಯಲ್ಲಿ ತರಬೇಕಾದ ಸುಧಾರಣೆ ಮತ್ತು ಎನ್‌ಟಿಎ ರಚನೆ ಹಾಗೂ ಕಾರ್ಯ ನಿರ್ವಹಣೆ ಕುರಿತು ಪರಿಶೀಲಿಸಬೇಕು

* ಪರೀಕ್ಷಾ ಪ್ರಕ್ರಿಯೆಯ ಆರಂಭದಿಂದ ಅಂತ್ಯದವರೆಗೆ ವಿಶ್ಲೇಷಿಸಬೇಕು. ಪರೀಕ್ಷಾ ವ್ಯವಸ್ಥೆಯಲ್ಲಿನ ದಕ್ಷತೆ ಸುಧಾರಣೆ ಮತ್ತು ಸಂಭವನೀಯ ದುಷ್ಕೃತ್ಯವನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಬೇಕು

* ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಮತ್ತು ಎನ್‌ಟಿಎ ಶಿಷ್ಟಾಚಾರಗಳ ಕುರಿತು ಸಂಪೂರ್ಣ ಪರಿಶೀಲನೆ ನಡೆಸಬೇಕು

* ಪರೀಕ್ಷೆಯ ಪ್ರತಿ ಹಂತದಲ್ಲೂ ಅನುರಿಸಬೇಕಾದ ಮತ್ತು ಅದನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಮೇಲ್ವಿಚಾರಣಾ ವ್ಯವಸ್ಥೆ ಹಾಗೂ ಹಾಲಿ ವ್ಯವಸ್ಥೆಯನ್ನು ಬಲಪಡಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸು ಮಾಡಬೇಕು

* ಪ್ರಶ್ನೆ ಪತ್ರಿಕೆಗಳ ಸೆಟ್ಟಿಂಗ್‌ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಭದ್ರತಾ ಶಿಷ್ಟಾಚಾರಗಳನ್ನು ಪರಿಶೀಲಿಸಿ, ವ್ಯವಸ್ಥೆಯ ದೃಢತೆಯನ್ನು ಹೆಚ್ಚಿಸಲು ಏನು ಮಾಡಬೇಕು ಎಂಬುದನ್ನು ತಿಳಿಸಬೇಕು


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries