ನವದೆಹಲಿ: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಪೊಲೀಸ್ ದೌರ್ಜನ್ಯದಿಂದ ಬೇಸತ್ತು ಇಬ್ಬರು ಸಹೋದರರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಸಂಬಂಧ ಲಿಖಿತ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಉತ್ತರ ಪ್ರದೇಶ ಡಿಜಿಪಿಗೆ ನೋಟಿಸ್ ನೀಡಿದೆ.
'ಜನರು ದೌರ್ಜನ್ಯಕ್ಕೆ ಒಳಗಾಗದಂತೆ ಪೊಲೀಸರು ರಕ್ಷಣೆ ನೀಡಬೇಕಿದೆ.
ಆಗ್ರಾದ ಇಬ್ಬರು ಸಹೋದರರು ಪೊಲೀಸ್ ಸಿಬ್ಬಂದಿಯಿಂದ ದೌರ್ಜನ್ಯಕ್ಕೊಳಗಾಗಿ, ಅದೇ ನೋವಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಜೂನ್ 25ರಂದು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಮಾಧ್ಯಮಗಳ ಈ ವರದಿ ನಿಜವೇ ಆಗಿದ್ದಲ್ಲಿ, ಇದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗುತ್ತದೆ. ಹಾಗಾಗಿ ಈ ಪ್ರಕರಣದ ಬಗ್ಗೆ ಒಂದು ವಾರದಲ್ಲಿ ವಿಸ್ತೃತ ವರದಿ ಸಲ್ಲಿಸುವಂತೆ ಡಿಜಿಪಿಗೆ ನೋಟಿಸ್ ನೀಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.