ಥಾಣೆ: ಮಹಾರಾಷ್ಟ್ರದ ಥಾಣೆ ಮತ್ತು ಪಾಲ್ಘರ್ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಡೀ ಭಾರಿ ಮಳೆಯಾಗಿದ್ದು , ಹಲವು ಪ್ರದೇಶಗಳು ಜಲಾವೃತಗೊಂಡಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಥಾಣೆ: ಮಹಾರಾಷ್ಟ್ರದ ಥಾಣೆ ಮತ್ತು ಪಾಲ್ಘರ್ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಡೀ ಭಾರಿ ಮಳೆಯಾಗಿದ್ದು , ಹಲವು ಪ್ರದೇಶಗಳು ಜಲಾವೃತಗೊಂಡಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಥಾಣೆ ನಗರದಲ್ಲಿ 37.06 ಮಿ.ಮೀ ಮಳೆಯಾಗಿದೆ.
ಭಾನುವಾರ ಮಧ್ಯರಾತ್ರಿ 12.30 ರಿಂದ 1.30ರ ನಡುವೆ ಗರಿಷ್ಠ 16.76 ಮಿ.ಮೀ ಮಳೆ ದಾಖಲಾಗಿದ್ದರೆ, 3.30 ರಿಂದ 4.30 ರ ನಡುವೆ 10.93 ಮಿ.ಮೀ ಮಳೆಯಾಗಿದೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್ನ ವಿಪತ್ತು ನಿರ್ವಹಣಾ ಕೇಂದ್ರದ ಮುಖ್ಯಸ್ಥ ಯಾಸಿನ್ ತದ್ವಿ ತಿಳಿಸಿದ್ದಾರೆ.
ನೆರೆಯ ಪಾಲ್ಘರ್ನಲ್ಲಿಯೂ ಭಾರಿ ಮಳೆ ಸುರಿದಿದೆ ಎಂದು ಜಿಲ್ಲಾ ವಿಪತ್ತು ನಿಯಂತ್ರಣ ಕೇಂದ್ರದ ಮುಖ್ಯಸ್ಥ ವಿವೇಕಾನಂದ ಕದಂ ಅವರು ತಿಳಿಸಿದ್ದಾರೆ.