ಬೆಂಗಳೂರು: ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಬೆಂಗಳೂರು: ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಉತ್ತರಾಖಂಡದ ಸಹಸ್ತ್ರ ತಾಲ್‌ನಲ್ಲಿ ಸಿಕ್ಕಿಬಿದ್ದಿರುವ 19 ಚಾರಣಿಗರ ಪೈಕಿ ನಾಲ್ವರು ಮೃತಪಟ್ಟಿದ್ದಾರೆ.
ದುರಂತದಲ್ಲಿ ಮೃತಪಟ್ಟವರ ಗುರುತು ಇನ್ನಷ್ಟೇ ಪತ್ತೆಹಚ್ಚಬೇಕಿದೆ. ಚಾರಣವನ್ನು ಮೌಂಟೇನಿಯರಿಂಗ್ ಫೌಂಡೇಶನ್ ಆಯೋಜಿಸಿತ್ತು ಎಂದು ತಿಳಿದು ಬಂದಿದೆ.
ಗಢವಾಲ್ ಜಿಲ್ಲಾಧಿಕಾರಿ ರಕ್ಷಣಾ ಕಾರ್ಯಾಚರಣೆಯ ಮೇಲ್ನೋಟ ವಹಿಸುತ್ತಿದ್ದಾರೆ. ಭಾರತೀಯ ವಾಯುಪಡೆಯ ನೆರವನ್ನು ಪಡೆಯಲಾಗುತ್ತಿದೆ.