ಕಾಸರಗೋಡು: ಮನಸ್ಸನ್ನು ಸಮತೋಲನವಾಗಿರಿಕೊಳ್ಳುವುದರ ಜತೆಗೆ ಆಧ್ಯಾತ್ಮಿಕ ಉನ್ನತಿಗೂ ಯೋಗ ಸಹಕಾರಿ ಎಂದು ಎಂದು ಬೆಂಗಳೂರು ಎಸ್ ವ್ಯಾಸ ಯೋಗ ವಿಶ್ವವಿದ್ಯಾಲಯದ ಸಲಹೆಗಾರ ಪೆÇ್ರ. ಕೆ. ಸುಬ್ರಹ್ಮಣ್ಯಂ ತಿಳಿಸಿದ್ದಾರೆ.
ಅವರು ಕಾಸರಗೋಡು ಪೆರಿಯದ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಯೋಗ ಅಧ್ಯಯನ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಆಯೋಜಿಸಿದ್ದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಭಾರ ಉಪಕುಲಪತಿ ಪೆÇ್ರ. ವಿನ್ಸೆಂಟ್ ಮ್ಯಾಥ್ಯೂ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗವನ್ನು ಉತ್ತೇಜಿಸಬೇಕು ಎಂದು ತಿಳಿಸಿದರು. ಯೋಗ ವಿಭಾಗದ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಪೈಲೂರು, ಸಹಾಯಕ ಪ್ರಾಧ್ಯಾಪಕ ಡಾ. ಎಂ.ಅಂಜಲಾದೇವಿ , ಪರೀಕ್ಷಾ ನಿಯಂತ್ರಣಾಧಿಕಾರಿ ಡಾ. ಆರ್. ಜಯಪ್ರಕಾಶ್, ಸ್ಕೂಲ್ ಆಫ್ ಮೆಡಿಸಿನ್ ಮತ್ತು ಸಾರ್ವಜನಿಕ ಆರೋಗ್ಯದ ಡೀನ್ ಪೆÇ್ರ. ಮ್ಯಾಥ್ಯೂ ಜಾರ್ಜ್, ಕಾರ್ಯಕ್ರಮ ಸಮಿತಿ ಅಧ್ಯಕ್ಷ ಪೆÇ್ರ. ಡಿ. ಗೋವಿಂದ ರಾವ್, ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿ ಡಾ. ಎಸ್. ಅನ್ಪಜಗಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಯೋಗ ನೃತ್ಯ ಹಾಗೂ ವಿವಿಧ ಕಲಾ ಕಾರ್ಯಕ್ರಮಗಳು ನಡೆಯಿತು.