ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ, ಅದರಲ್ಲೂ ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಲ್ಲಿ ಮತ ಎಣಿಕೆಯು ನಿಧಾನಗತಿಯಲ್ಲಿ ನಡೆದಿದೆ ಎಂದು ಕಾಂಗ್ರೆಸ್ ನಿಯೋಗ ಆರೋಪಿಸಿದೆ.
ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ, ಅದರಲ್ಲೂ ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಲ್ಲಿ ಮತ ಎಣಿಕೆಯು ನಿಧಾನಗತಿಯಲ್ಲಿ ನಡೆದಿದೆ ಎಂದು ಕಾಂಗ್ರೆಸ್ ನಿಯೋಗ ಆರೋಪಿಸಿದೆ.
ಈ ಸಂಬಂಧ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯೋಗದ ಇತರೆ ಆಯುಕ್ತರನ್ನು ಭೇಟಿ ಮಾಡಿದ ಅಭಿಷೇಕ್ ಮನು ಸಿಂಘ್ವಿ ಮತ್ತು ಸಲ್ಮಾನ್ ಖುರ್ಷಿದ್ ಅವರನ್ನು ಒಳಗೊಂಡ ಕಾಂಗ್ರೆಸ್ ನಿಯೋಗವು, ಪ್ರತಿಯೊಂದು ಸುತ್ತಿನ ಮತ ಎಣಿಕೆ ಮುಗಿದ ಕೂಡಲೇ ಅದರ ವಿವರಗಳನ್ನು ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಒತ್ತಾಯಿಸಿತು.