ನವದೆಹಲಿ: ಇಲ್ಲಿಯ ಸಫ್ದರ್‌ಜಂಗ್ ಆಸ್ಪತ್ರೆಯ ಹಳೆಯ ತುರ್ತು ಚಿಕಿತ್ಸೆ ಕಟ್ಟದ ಉಗ್ರಾಣದಲ್ಲಿ ಮಂಗಳವಾರ ಬೆಂಕಿ ಹೊತ್ತಿಕೊಂಡಿತ್ತು ಎಂದು ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್‌ಎಸ್) ಅಧಿಕಾರಿಗಳು ತಿಳಿಸಿದರು.
ನವದೆಹಲಿ: ಇಲ್ಲಿಯ ಸಫ್ದರ್‌ಜಂಗ್ ಆಸ್ಪತ್ರೆಯ ಹಳೆಯ ತುರ್ತು ಚಿಕಿತ್ಸೆ ಕಟ್ಟದ ಉಗ್ರಾಣದಲ್ಲಿ ಮಂಗಳವಾರ ಬೆಂಕಿ ಹೊತ್ತಿಕೊಂಡಿತ್ತು ಎಂದು ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್‌ಎಸ್) ಅಧಿಕಾರಿಗಳು ತಿಳಿಸಿದರು.
ಯಾರೂ ಗಾಯಗೊಂಡ ಕುರಿತು ಈವರೆಗೆ ವರದಿಯಾಗಿಲ್ಲ. ಕಟ್ಟಡದ ಮೂರನೇ ಅಂತಸ್ತಿನಲ್ಲಿದ್ದ ಶುಷ್ರೂಷಕಿಯೊಬ್ಬರನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು.
ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆಸ್ಪತ್ರೆಯಲ್ಲಿದ್ದ ಯಾವ ರೋಗಿಗೂ ಸಮಸ್ಯೆಯಾಗಿಲ್ಲ ಎಂದು ಆಸ್ಪತ್ರೆ ಆಡಳಿತ ತಿಳಿಸಿದೆ.
ಆಸ್ಪತ್ರೆಯ ಕಟ್ಟಡವೊಂದಕ್ಕೆ ಬೆಂಕಿ ಹೊತ್ತಿಕೊಂಡಿರುವ ಕುರಿತು ಸುಮಾರು 10.40ಕ್ಕೆ ಮಾಹಿತಿ ದೊರಕಿತು. ಕೂಡಲೇ ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳನ್ನು ಕಳಿಸಲಾಯಿತು. ಶಾರ್ಟ್ ಸರ್ಕೀಟ್‌ನಿಂದ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.