ಬದಿಯಡ್ಕ: ಬದಿಯಡ್ಕ ಶ್ರೀಭಾರತೀ ವಿದ್ಯಾಪೀಠದಲ್ಲಿ ವಾಚನ ವಾರಾಚರಣೆಗೆ ಚಾಲನೆಯನ್ನು ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಅವರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹಿತವಚನಗಳನ್ನು ನೀಡಿದರು. ಆಧುನಿಕ ಯುಗದಲ್ಲಿ ಬದುಕುತ್ತಿರುವ ನಾವು ಇಂದು ಯಾವುದೇ ವಿಚಾರವನ್ನು ಸುಲಭದಲ್ಲಿ ತಿಳಿದುಕೊಳ್ಳಲು ಸಾಧ್ಯವಿದೆ. ಓದುವ ಹವ್ಯಾಸವನ್ನು ಬೆಳೆಸಿಕೊಂಡಾಗ ಸಿಗುವ ಜ್ಞಾನವು ನಮ್ಮ ಮಸ್ತಕದಲ್ಲಿ ಸ್ಥಿರವಾಗಿ ನಿಲ್ಲುತ್ತದೆ ಎಂದರು. ಶಾಲಾ ಶಿಕ್ಷಕ ವೃಂದದ ನೇತೃತ್ವದಲ್ಲಿ ವಾಚನ ವಾರಾಚರಣೆ ಆರಂಭವಾಯಿತು.