ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ಉಂಟಾದ ಬೆಂಕಿ ಅವಘಡದಿಂದಾಗಿ ಇಬ್ಬರು ಶಿಕ್ಷಕಿಯರು ಗಾಯಗೊಂಡಿದ್ದಾರೆ.
ಹೌರಾ: ಶಾಲೆಯಲ್ಲಿ ಬೆಂಕಿ ಅವಘಡ, ಶಿಕ್ಷಕಿಯರಿಗೆ ಗಾಯ
0
ಜೂನ್ 28, 2024
Tags
ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ಉಂಟಾದ ಬೆಂಕಿ ಅವಘಡದಿಂದಾಗಿ ಇಬ್ಬರು ಶಿಕ್ಷಕಿಯರು ಗಾಯಗೊಂಡಿದ್ದಾರೆ.
ಗುರುವಾರ ಬೆಳಿಗ್ಗೆ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಘಟನೆ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಟ್ಟನಗರದಲ್ಲಿರುವ ಶಾಲೆಯಲ್ಲಿ ಈ ವೇಳೆ ಕೆಲವು ಮಕ್ಕಳು ಹಾಜರಿದ್ದರು.
ಎರಡು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಿವೆ ಎಂದು ಪೊಲೀಸರು ಹೇಳಿದ್ದಾರೆ.
ಶಾಲೆಯ ಮುಖ್ಯಶಿಕ್ಷಕಿ ತಪಸಿ ಗೋಸ್ವಾಮಿ ಸೇರಿದಂತೆ ಗಾಯಗೊಂಡ ಇಬ್ಬರು ಶಿಕ್ಷಕಿಯರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಘಟನೆಯ ವೇಳೆ ಬೆರಳೆಣಿಯಷ್ಟು ವಿದ್ಯಾರ್ಥಿಗಳು ಮಾತ್ರ ಶಾಲೆ ತಲುಪಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿಲಿಂಡರ್‌ನಿಂದ ಅನಿಲ ಸೋರಿಕೆ ಉಂಟಾಗಿರುವುದು ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.