ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಎ.ಯು.ಪಿ ಶಾಲೆ, ಬ್ಲಡ್ ಈಸ್ ಕೇರಳ ಹಾಗೂ ಕಾಸರಗೋಡು ಜನರಲ್ ಆಸ್ಪತ್ರೆಯ ಸಹಯೋಗದೊಂದಿಗೆ ಮೀಯಪದವು ಶಾಲೆಯ ಭಾಗೀರಥಿ ಹಾಲ್ ನಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು.
ಶಿಬಿರವನ್ನು ಮೀಂಜ ಪಂಚಾಯತಿ ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿ ಔಪಚಾರಿಕವಾಗಿ ಉದ್ಘಾಟಿಸಿದರು. ಶಾಲಾ ಆಡಳಿತ ಸಲಹೆಗಾರ ಶ್ರೀಧರ್ ರಾವ್ ಆರ್.ಎಂ, ಕಾಸರಗೋಡು ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿ ಡಾ.ಸೌಮ್ಯ, ಬ್ಲಡ್ ಈಸ್ ಕೇರಳ ಸಂಸ್ಥೆಯ ಕಾಸರಗೋಡು ಸಂಯೋಜಕ ರಜಾಕ್, ಶಾಲಾ ಪಿ.ಟಿ.ಎ ಅಧ್ಯಕ್ಷ ಹಮೀದ್ ಮೈತಾಳ್ ಹಾಗೂ ಮುಖ್ಯೋಪಾಧ್ಯಾಯ ಅರವಿಂದಾಕ್ಷ ಭಂಡಾರಿ ಶುಭ ಹಾರೈಸಿದರು. ಅಧ್ಯಾಪಕ ಹರೀಶ್ ಸುಲಾಯ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಅಧ್ಯಾಪಕರು,ಹೆತ್ತವರು ಹಾಗೂ ಹಳೆ ವಿದ್ಯಾರ್ಥಿಗಳು ರಕ್ತದಾನ ಮಾಡಿ ಸಹಕರಿಸಿದರು.