ನವದೆಹಲಿ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ಮುಂದಿನ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ ಎಂದು ಪಕ್ಷದ ನಾಯಕ ಸರ್ವರ್ ಮಲಿಕ್ ಇಂದು( ಭಾನುವಾರ) ಹೇಳಿದ್ದಾರೆ.
ಆನಂದ್ ಅವರು ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಮುಂಬರುವ ಪಂಜಾಬ್ ಮತ್ತು ಉತ್ತರಾಖಂಡ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಎಸ್‌ಪಿ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಆಕಾಶ್ ಆನಂದ್ ಅವರು ಸ್ಥಾನ ಪಡೆದುಕೊಂಡಿದ್ದಾರೆ.
ಈ ಹಿಂದೆಯೂ ಮಾಯಾವತಿಯವರ ರಾಜಕೀಯ ಉತ್ತರಾಧಿಕಾರಿ ಸ್ಥಾನಕ್ಕೆ ಆಕಾಶ್ ಆನಂದ್ ಹೆಸರು ಕೇಳಿಬಂದಿತ್ತು. ಆದರೆ ಅವರು ಸಂಪೂರ್ಣವಾಗಿ ಜವಾಜ್ದಾರಿ ವಹಿಸಿಕೊಳ್ಳಲು ಕಾಲಾವಕಾಶ ಬೇಕೆಂಬ ಚರ್ಚೆಗಳು ನಡೆದಿತ್ತು.