ನವದೆಹಲಿ: ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಪ್ರಧಾನಿ ನರೇಂದ್ರ ಮೌನವಾಗಿರುವುದು ಏಕೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಪ್ರಶ್ನೆ ಮಾಡಿದ್ದಾರೆ.
ನವದೆಹಲಿ: ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಪ್ರಧಾನಿ ನರೇಂದ್ರ ಮೌನವಾಗಿರುವುದು ಏಕೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಪ್ರಶ್ನೆ ಮಾಡಿದ್ದಾರೆ.
ಮೇ 5ರಂದು 4,750 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 24 ಲಕ್ಷ ಆಕಾಂಕ್ಷಿಗಳು ಪರೀಕ್ಷೆ ಬರೆದಿದ್ದರು.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಕಪಿಲ್ ಸಿಬಲ್, 'ನೀಟ್ ಪರೀಕ್ಷೆ. ಗುಜರಾತ್ ಫ್ಯಾಕ್ಟರ್. ಬಹಿರಂಗ ಭ್ರಷ್ಟಾಚಾರ. ಬಹಿರಂಗ ಮ್ಯಾನಿಪ್ಯುಲೇಷನ್. ದಯವಿಟ್ಟು ಗಮನಿಸಿ: ಮೋದಿ 'ನೀಟ್' ಸೈಲೆನ್ಸ್' ಎಂದು ಹೇಳಿದ್ದಾರೆ.
ನೀಟ್ ಪರೀಕ್ಷೆ ಫಲಿತಾಂಶದ ವಿವಾದಕ್ಕೆ ಸಂಬಂಧಿಸಿದಂತೆ 1,563 ವಿದ್ಯಾರ್ಥಿಗಳಿಗೆ ನೀಡಲಾದ ಕೃಪಾಂಕವನ್ನು ರದ್ದುಗೊಳಿಸಿ, ಆ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.