ವಿರುಧನಗರ: ತಮಿಳುನಾಡಿನ ವಿರುಧನಗರ ಜಿಲ್ಲೆಯ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಒಬ್ಬ ಗಾಯಗೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ವಿರುಧನಗರ: ತಮಿಳುನಾಡಿನ ವಿರುಧನಗರ ಜಿಲ್ಲೆಯ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಒಬ್ಬ ಗಾಯಗೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಬಂಡುವಾರಪಟ್ಟಿ ಗ್ರಾಮದ 'ಗುರು ಸ್ಟಾರ್ ಫೈಯರ್ ವರ್ಕರ್' ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಈ ಘಟಕವು ಸತ್ತೂರಿನ ಅಚಂಕುಳಂನ ಸಾಗದೇವನ್ ಎಂಬುವವರ ಒಡೆತನದಲ್ಲಿದೆ ಎಂದು ತಿಳಿದುಬಂದಿದೆ.
'ಸ್ಪೋಟದಿಂದ ಕಾರ್ಮಿಕರು ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಪಟಾಕಿ ತಯಾರಿಕೆಗೆ ಬಳಸುವ ರಾಸಾಯನಿಕ ಪದಾರ್ಥಗಳು, ಕಚ್ಚಾ ಸಾಮಗ್ರಿಗಳನ್ನು ಸರಿಯಾಗಿ ನಿರ್ವಹಿಸದಿರುವುದೇ ಸ್ಪೋಟಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ' ಎಂದು ಜಿಲ್ಲಾ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಕಟ್ಟಡದ ಹೊರಗಡೆ ಇದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಟ್ಟಡವು ಸಂಪೂರ್ಣ ಹಾನಿಯಾಗಿದೆ ಎಂದು ತಿಳಿಸಿದರು.