ತಿರುವನಂತಪುರಂ: ಇಸ್ರೋ ಬೇಹುಗಾರಿಕೆ ಸಂಚು ಪ್ರಕರಣದಲ್ಲಿ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ವಿಜ್ಞಾನಿ ನಂಬಿ ನಾರಾಯಣನ್ ಅವರನ್ನು ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿರುವ ಬಗ್ಗೆ ತನಿಖೆ ನಡೆದಿದೆ.
ತಿರುವನಂತಪುರ ಸಿಜೆಎಂ ನ್ಯಾಯಾಲಯದಲ್ಲಿ ಐವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಸಿಬಿಐನ ದೆಹಲಿ ಘಟಕವು ಪ್ರಕರಣದ ತನಿಖೆ ನಡೆಸುತ್ತಿದೆ.
ವಿಜ್ಞಾನಿ ನಂಬಿ ನಾರಾಯಣನ್ ಅವರನ್ನು ಬೇಹುಗಾರಿಕೆ ಪ್ರಕರಣದಲ್ಲಿ ಸಿಲುಕಿಸಲು ಸಂಚು ನಡೆದಿರುವುದನ್ನು ಸುಪ್ರೀಂ ಕೋರ್ಟ್ ನೇಮಿಸಿದ್ದ ಸಮಿತಿ ಪತ್ತೆ ಮಾಡಿತ್ತು. ನಂತರ ಕೇಂದ್ರ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿತ್ತು.
ರಾಜ್ಯ ಪೋಲೀಸ್ ಮತ್ತು ಗುಪ್ತಚರ ಬ್ಯೂರೋದ 25 ಅಧಿಕಾರಿಗಳ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿದೆ. ಮುಂದಿನ ದಿನಗಳಲ್ಲಿ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಲಿದೆ.