ನವದೆಹಲಿ: ಕೇಂದ್ರ ಸರ್ಕಾರವು ಅಜಿತ್ ದೋವಲ್ ಅವರನ್ನು ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ಮರುನೇಮಕ ಮಾಡಿದ್ದಾರೆ. ಪಿಕೆ ಮಿಶ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ಮರುನೇಮಕ ಮಾಡಲಾಗಿದೆ.
ಜೂ.10ರಿಂದ ಜಾರಿಗೆ ಬರುವಂತೆ ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಪಿ.ಕೆ. ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಡಾ. ಪಿ.ಕೆ. ಮಿಶ್ರಾ ಅವರನ್ನು ನೇಮಕ ಮಾಡಲು ಕ್ಯಾಬಿನೆಟ್ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ. ಅವರ ನೇಮಕಾತಿಯು ಪ್ರಧಾನ ಮಂತ್ರಿಯ ಅವಧಿ ಮುಗಿಯುವವರೆಗೆ ಅಥವಾ ಮುಂದಿನ ಆದೇಶದವರೆಗೆ ವ್ಯಾಲಿಡ್ ಆಗಿರುತ್ತದೆ. ಅವರ ಕಚೇರಿಯ ಅವಧಿಯಲ್ಲಿ ಅವರಿಗೆ ಕ್ಯಾಬಿನೆಟ್ ಸಚಿವರ ಶ್ರೇಣಿಯನ್ನು ನೀಡಲಾಗಿದೆ.
ಅಮಿತ್ ಖರೆ ಮತ್ತು ತರುಣ್ ಕಪೂರ್ ಅವರನ್ನು ಪ್ರಧಾನ ಮಂತ್ರಿಗಳ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಪ್ರಧಾನ ಮಂತ್ರಿಗಳ ಕಚೇರಿಯಲ್ಲಿ, ಭಾರತ ಸರ್ಕಾರದ ಕಾರ್ಯದರ್ಶಿಯ ಶ್ರೇಣಿಯಲ್ಲಿ ಎರಡು ವರ್ಷಗಳ ಅವಧಿಗೆ ಜೂ.10ರಿಂದ ಜಾರಿಗೆ ಬರುವಂತೆ ಅಥವಾ ಮುಂದಿನ ಆದೇಶದವರೆಗೆ ಈ ನೇಮಕ ಮಾಡಲಾಗಿದೆ.
ಅಜಿತ್ ದೋವಲ್ ಅವರನ್ನು ಗುರುವಾರ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮರು ನೇಮಕ ಮಾಡಲಾಗಿದೆ ಎಂದು ಸರ್ಕಾರ ಖಚಿತಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರು ಡಾ. ಪಿ.ಕೆ. ಮಿಶ್ರಾ ಅವರನ್ನು ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮರುನೇಮಕಗೊಳಿಸುವುದರೊಂದಿಗೆ ಇಬ್ಬರು ನಿವೃತ್ತ ಅಧಿಕಾರಿಗಳು ಪ್ರಧಾನ ಮಂತ್ರಿಗಳಿಗೆ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನ ಸಲಹೆಗಾರರಾಗಿದ್ದಾರೆ.
ಇಂಟೆಲಿಜೆನ್ಸ್ ಬ್ಯೂರೋದ ಮಾಜಿ ನಿರ್ದೇಶಕರಾದ ದೋವಲ್ ಅವರು ಪ್ರಧಾನಿಯವರ ಅತ್ಯಂತ ವಿಶ್ವಾಸಾರ್ಹ ಸಹಾಯಕರಲ್ಲಿ ಒಬ್ಬರು ಮತ್ತು 2014 ರಿಂದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿದ್ದಾರೆ. ಕೇರಳ ಕೇಡರ್‌ಗೆ ಸೇರಿದ 1968-ಬ್ಯಾಚ್ IPS ಅಧಿಕಾರಿ, ಮೊದಲ ಪೊಲೀಸ್ ಆಗಿದ್ದರು. ಅಶೋಕ ಚಕ್ರದ ನಂತರದ ಎರಡನೇ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ ಕೀರ್ತಿ ಚಕ್ರದಿಂದ ಅಲಂಕರಿಸಲ್ಪಟ್ಟಿದೆ.
ನೃಪೇಂದ್ರ ಮಿಶ್ರಾ ಬದಲಿಗೆ ಪಿಕೆ ಮಿಶ್ರಾ ಅವರು 2019 ರಲ್ಲಿ ಪ್ರಧಾನ ಮಂತ್ರಿಯ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. 1972 ರ ಬ್ಯಾಚ್‌ನ ಗುಜರಾತ್ ಕೇಡರ್ ಐಎಎಸ್ ಅಧಿಕಾರಿಯಾಗಿರುವ ಮಿಶ್ರಾ ಅದಕ್ಕೂ ಮೊದಲು ಪ್ರಧಾನ ಮಂತ್ರಿಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಇಂಗ್ಲೆಂಡ್‌ನ ಸಸೆಕ್ಸ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ/ಅಭಿವೃದ್ಧಿ ಅಧ್ಯಯನದಲ್ಲಿ ಪಿಎಚ್‌ಡಿ ಪಡೆದಿದ್ದಾರೆ.