ಕೊಚ್ಚಿ: ಶಬರಿಮಲೆ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಯೋಜನೆಗೆ ಭೂಸ್ವಾಧೀನ ಅಧಿಸೂಚನೆಯನ್ನು ಹಿಂಪಡೆಯುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ಭೂಸ್ವಾಧೀನಕ್ಕೆ ಹೊಸ ಅಧಿಸೂಚನೆ ಹೊರಡಿಸುವುದಾಗಿಯೂ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.
ಸಾಮಾಜಿಕ ಪರಿಣಾಮದ ಅಧ್ಯಯನವನ್ನು ಹೊಸ ಏಜೆನ್ಸಿಯಿಂದ ನಡೆಸಲಾಗುವುದು ಎಂದು ಸರ್ಕಾರ ಹೇಳಿದೆ. ಪ್ರಸ್ತುತ ಅಧಿಸೂಚನೆಗೆ ಈ ಹಿಂದೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿಲುವನ್ನು ಬದಲಿಸಿದೆ. ಬಿಲೀವರ್ಸ್ ಚರ್ಚ್ ಅಧೀನದಲ್ಲಿರುವ ಅಯನಾ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅಧಿಸೂಚನೆಗೆ ತಡೆ ನೀಡಿತ್ತು.