ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಎರಡು ದಿನಗಳ ಭೇಟಿ ನೀಡಿದ್ದಾರೆ. ಅಲ್ಲಿ ಅವರು ಸುಮಾರು 1,500 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶ್ರೀನಗರಕ್ಕೆ ಆಗಮಿಸಿದ ನಂತರ ಯುವ ಜನತೆಯ ಅಭಿವೃದ್ಧಿ ಕೇಂದ್ರೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಾಳೆ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.