ಕಾಸರಗೋಡು: ಎರಡು ತಿಂಗಳ ಬೇಸಿಗೆ ರಜೆಯ ನಂತರ ಕೇರಳಾದ್ಯಂತ ಸೋಮವಾರ ಶಾಲಾ, ಕಾಲೇಜುಗಳು ಪುನಾರಂಭಗೊಂಡಿತು. ಜಿಲ್ಲೆಯ ನಾನಾ ಶಾಲೆಗಳಲ್ಲಿ ವರ್ಣರಂಜಿತ ಹಾಗೂ ಅದ್ದೂರಿ ಕಾರ್ಯಕ್ರಮಗಳೊಂದಿಗೆ ವಿದ್ಯಾರ್ಥಿಗಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು. ಕಾಸರಗೋಡು ಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ ಕಾರ್ಯಕ್ರಮ ಕೋಡೋತ್ ಡಾ. ಅಂಬೇಡ್ಕರ್ ಸ್ಮಾರಕ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಿತು. ಹೊಸದುರ್ಗ ಶಾಸಕ ಇ. ಚಂದ್ರಶೇಖರನ್ ಉದ್ಘಾಟಿಸಿದರು. ಕಾಸರಗೋಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ಶಾಲ ಪ್ರವೇಶೋತ್ಸವ ಅಂಗವಾಘಿ ಇವಿಧ ಸಾಂಸ್ಕ್ರತಿಕ ಕಲಾ ಕಾರ್ಯಕ್ರಮ ಜರುಗಿತು.