HEALTH TIPS

ಅಯೋಧ್ಯೆ, ಪ್ರಯಾಗ್‌ರಾಜ್‌ನಲ್ಲಿ ಗಣ್ಯರಿಗೆ ಅತಿಥಿ ಗೃಹ: ಸಿಎಂ ಯೋಗಿ ಆದಿತ್ಯನಾಥ್‌

         ಖನೌ: ರಾಷ್ಟ್ರಪತಿ, ಪ್ರಧಾನಿ ಮತ್ತು ರಾಜ್ಯಪಾಲರು ಮೊದಲಾದ ಗಣ್ಯರಿಗಾಗಿ ಅಯೋಧ್ಯೆ ಮತ್ತು ಪ್ರಯಾಗ್‌ರಾಜ್‌ನಲ್ಲಿ ಅತಿಥಿ ಗೃಹಗಳನ್ನು ನಿರ್ಮಿಸಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ.

        ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಶುಕ್ರವಾರ ಅತಿಥಿ ಗೃಹಗಳ ನಿರ್ಮಾಣ ಸ್ಥಳ, ಸೌಲಭ್ಯ ಮತ್ತು ಇತರ ಅಂಶಗಳನ್ನು ಪರಿಶೀಲಿಸಿದರು ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ, ದೇಶದ ಪ್ರಮುಖ ಗಣ್ಯರು ಮತ್ತು ಇತರ ದೇಶಗಳ ಪ್ರಮುಖರಿಗೆ ಅಯೋಧ್ಯೆ ಮತ್ತು ಪ್ರಯಾಗರಾಜ್‌ನಲ್ಲಿ ಅತ್ಯುತ್ತಮ ಗುಣಮಟ್ಟದ ಅತಿಥಿ ಗೃಹಗಳ ಅಗತ್ಯವನ್ನು ಮುಖ್ಯಮಂತ್ರಿಗಳು ಒತ್ತಿ ಹೇಳಿದರು. ಆದಷ್ಟು ಶೀಘ್ರ ಕಾಮಗಾರಿ ಆರಂಭಿಸಬೇಕು, ಅಲ್ಲದೇ ಕಟ್ಟಡವು ರಾಮ ಮಂದಿರಕ್ಕಿಂತ ಎತ್ತರ ಇರಬಾರದು ಎಂದು ಸೂಚಿಸಿದರು.

            ಅಯೋಧ್ಯೆಯ ಸರಯೂ ನದಿ ದಡದಲ್ಲಿರುವ ಪ್ರವಾಸೋದ್ಯಮ ಇಲಾಖೆಗೆ ಸೇರಿದ ಜಾಗವು ಅತಿಥಿ ಗೃಹ ನಿರ್ಮಾಣಕ್ಕೆ ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ಅತಿಥಿ ಗೃಹವು ಸುಮಾರು ಮೂರೂವರೆ ಎಕರೆ ವಿಸ್ತೀರ್ಣ ಇರಲಿದ್ದು, ವೈಷ್ಣವ ಸಂಪ್ರದಾಯವನ್ನು ಪ್ರತಿಬಿಂಬಿಸುವ ವಾಸ್ತುಶಿಲ್ಪದ ಅಂಶಗಳನ್ನು ಒಳಗೊಂಡಿರಲಿದೆ ಎಂದು ಹೇಳಿಕೆ ತಿಳಿಸಿದೆ.

             ಅತಿಥಿ ಗೃಹಗಳಲ್ಲಿ 'ಒಂದು ಜಿಲ್ಲೆ ಒಂದು ಉತ್ಪನ್ನ' ಎಂಬ ವಿಶೇಷ ಬ್ಲಾಕ್‌ಗಳು ಇರಬೇಕು. ಇದರಿಂದ ಪ್ರವಾಸಿಗರು ರಾಜ್ಯದ ವೈವಿಧ್ಯಮಯ ಕರಕುಶಲ ವಸ್ತುಗಳ ಕುರಿತು ತಿಳಿದುಕೊಳ್ಳಬಹುದು ಎಂದೂ ಮುಖ್ಯಮಂತ್ರಿ ಹೇಳಿದರು ಎನ್ನಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries