ವೃತ್ತಿಯಲ್ಲಿ ವೈದ್ಯರಾಗಿರುವ ವ್ಯಕ್ತಿಗೆ ಇತ್ತೀಚೆಗೆ ಜ್ವರ ಮತ್ತು ದದ್ದುಗಳಂತಹ ಲಕ್ಷಣಗಳು ಕಾಣಿಸಿಕೊಂಡಿದ್ದು, ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ನಗರದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ(ಎನ್‌ಐವಿ) ಕಳುಹಿಸಲಾಗಿದೆ. ಜೂನ್ 21 ರಂದು, ಅವರ ವರದಿ ಬಂದಿದ್ದು, ಝಿಕಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಪುಣೆ ಮುನ್ಸಿಪಲ್ ಕಾರ್ಪೊರೇಷನ್(PMC)ನ ಆರೋಗ್ಯ ಅಧಿಕಾರಿ ಹೇಳಿದ್ದಾರೆ.
ಸೋಂಕಿತ ವೈದ್ಯ ನಗರದ ಎರಂದವಾಣೆ ನಿವಾಸಿಯಾಗಿದ್ದು, ಅವರಿಗೆ ಪಾಸಿಟಿವ್ ಬಂದ ನಂತರ, ಅವರ ಕುಟುಂಬದ ಐದು ಸದಸ್ಯರ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು ಮತ್ತು ಅವರ 15 ವರ್ಷದ ಮಗಳಿಗೂ ಝಿಕಾ ವೈರಸ್ ಪಾಸಿಟಿವ್ ಬಂದಿದೆ" ಎಂದು ಅಧಿಕಾರಿ ತಿಳಿಸಿದ್ದಾರೆ.
ಝಿಕಾ ವೈರಸ್ ಈಡಿಸ್ ಈಜಿಪ್ಟಿ ಸೊಳ್ಳೆಯಿಂದ ಉಂಟಾಗುವ ಕಾಯಿಲೆಯಾಗಿದ್ದು, ಈ ರೋಗದ ಶೇಕಡಾ 80 ರಷ್ಟು ರೋಗಿಗಳು ಯಾವುದೇ ರೋಗಲಕ್ಷಣಗಳನ್ನು ತೋರಿಸುವುದಿಲ್ಲ. ಕೆಲವು ರೋಗಿಗಳು ಜ್ವರ, ಕೀಲು ನೋವು, ದೇಹದ ನೋವು, ತಲೆನೋವು, ಕೆಂಪು ಕಣ್ಣುಗಳು, ವಾಂತಿ, ಅಸ್ವಸ್ಥತೆ, ಜ್ವರ ಮತ್ತು ದೇಹದ ದದ್ದುಗಳನ್ನು ಅನುಭವಿಸುತ್ತಾರೆ.