ನವದೆಹಲಿ: ಶಂಕಿತ ಖಾಲಿಸ್ತಾನಿ ಸಿಖ್ ಕಾರ್ಯಕರ್ತರು ಇಟಲಿಯಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ನವದೆಹಲಿ: ಶಂಕಿತ ಖಾಲಿಸ್ತಾನಿ ಸಿಖ್ ಕಾರ್ಯಕರ್ತರು ಇಟಲಿಯಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಜಿ-5 ರಾಷ್ಟ್ರಗಳ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಯುರೋಪ್ ರಾಷ್ಟ್ರಕ್ಕೆ ಭೇಟಿ ನೀಡಬೇಕಿರುವ ಕೆಲವೇ ದಿನಗಳ ಮುಂಚಿತವಾಗಿ ಈ ಘಟನೆ ನಡೆದಿದೆ.
ಈ ಘಟನೆ ಕುರಿತು ಭಾರತ ಸರ್ಕಾರವು ರೋಮ್ ಪ್ರಧಾನಿ ಜಾರ್ಜಿಯಾ ಮೆಲೊನಿ ಅವರ ಬಳಿ ಅಸಮಾಧಾನ ವ್ಯಕ್ತಪಡಿಸಿದೆ. ಇದರಿಂದ ಎಚ್ಚೆತ್ತಿರುವ ಅಲ್ಲಿನ ಸ್ಥಳೀಯ ಸರ್ಕಾರವು, ಗಾಂಧೀಜಿ ಪ್ರತಿಮೆಯನ್ನು ಸರಿಪಡಿಸುವ ಕೆಲಸ ಮಾಡುತ್ತಿದೆ. ಅಲ್ಲದೆ, ಪ್ರತಿಮೆ ಮೇಲೆ ಶಂಕಿತ ಖಾಲಿಸ್ತಾನಿ ಸಿಖ್ ಕಾರ್ಯಕರ್ತರು ಎರಚಿದ್ದಾರೆ ಎನ್ನಲಾದ ಪೇಂಟ್ ಅನ್ನು ಅಳಿಸಿಹಾಕಲಾಗಿದೆ.
ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಭಗ್ನಗೊಳಿಸಿರುವುದು ದುರದೃಷ್ಟಕರ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಬೇಸರ ವ್ಯಕ್ತಪಡಿಸಿದ್ದಾರೆ.