ನವದೆಹಲಿ: ಸೇನೆಯ ಮುಖ್ಯಸ್ಥರಾಗಿದ್ದ ಜನರಲ್ ಮನೋಜ್ ಪಾಂಡೆ ಅವರು ನಿವೃತ್ತರಾದ ಬೆನ್ನಲ್ಲೇ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರು ಇಂದು (ಭಾನುವಾರ) ಅಧಿಕಾರ ವಹಿಸಿಕೊಂಡರು.
ನವದೆಹಲಿ: ಸೇನೆಯ ಮುಖ್ಯಸ್ಥರಾಗಿದ್ದ ಜನರಲ್ ಮನೋಜ್ ಪಾಂಡೆ ಅವರು ನಿವೃತ್ತರಾದ ಬೆನ್ನಲ್ಲೇ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರು ಇಂದು (ಭಾನುವಾರ) ಅಧಿಕಾರ ವಹಿಸಿಕೊಂಡರು.
ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಅಪಾರ ಕಾರ್ಯಾಚರಣೆಯ ಅನುಭವ ಹೊಂದಿರುವ ಜನರಲ್ ದ್ವಿವೇದಿ ಅವರು ಸೇನೆಯ ಉಪಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು.
ಫೆಬ್ರವರಿ 19ರಂದು ಸೇನಾ ಸಿಬ್ಬಂದಿಯ ಉಪಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು, ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು 2022-2024ರವರೆಗೆ ಉತ್ತರ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು 18ನೇ ಜಮ್ಮು ಮತ್ತು ಕಾಶ್ಮೀರ ರೈಫಲ್ಸ್ ರೆಜಿಮೆಂಟ್ ಮತ್ತು 26ನೇ ವಲಯದ ಅಸ್ಸಾಂ ರೈಫಲ್ಸ್ ಬ್ರಿಗೇಡ್ ಮುಖ್ಯಸ್ಥ, ಅಸ್ಸಾಂ ರೈಫಲ್ಸ್ (ಪೂರ್ವ) ಮತ್ತು 9ನೇ ಕಾರ್ಪ್ಸ್‌ನ ಇನ್ಸ್‌ಪೆಕ್ಟರ್ ಜನರಲ್, ಉತ್ತರ ಕಮಾಂಡ್‌ನಲ್ಲಿ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಕಾರ್ಯನಿರ್ವಹಿಸಿದ್ದಾರೆ.
ಜನರಲ್ ಮನೋಜ್ ಪಾಂಡೆ ಅವರು ಇಂದು (ಜೂನ್ 30) ನಿವೃತ್ತರಾಗಲಿದ್ದು, ಸೇವಾ ಹಿರಿತನ ಆಧರಿಸಿ ದ್ವಿವೇದಿ ಅವರನ್ನು ಸೇನಾ ಮುಖ್ಯಸ್ಥರನ್ನಾಗಿ ಜೂನ್ 11ರಂದು ರಕ್ಷಣಾ ಸಚಿವಾಲಯ ನೇಮಕಗೊಳಿಸಿತ್ತು.