ದಕ್ಷಿಣ ಕನ್ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದಿನಿಯಲ್ಲಿ ನಡೆದಿದೆ.
ಮೃತರನ್ನು ಯಾಸೀರ್ (45), ಮರಿಯಮ್ಮ (40), ಮಕ್ಕಳಾದ ರಿಯಾನ್ ಮತ್ತು ರಿಫಾನ್ ಎಂದು ಗುರುತಿಸಲಾಗಿದೆ.
ನಿನ್ನೆ (ಜೂನ್ 25) ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ.
ಪಕ್ಕದಲ್ಲಿ ವಾಸವಿದ್ದ ಅಬೂಬಕ್ಕರ್ ಎಂಬುವರಿಗೆ ಸೇರಿದ ಮನೆಯ ಗೋಡೆ ಕುಸಿದು ಯಾಸೀರ್ ಅವರ ಮನೆಗೆ ಮೇಲೆ ಬಿದ್ದ ಪರಿಣಾಮ ಗೋಡೆ ಕುಸಿತವಾಗಿ ಇಡೀ ಕುಟುಂಬ ದುರಂತ ಅಂತ್ಯ ಕಂಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.