ಮುಂಬೈ: ಮುಂಬರುವ ವಿಧಾನಸಭೆ ಚುನಾವಣೆಯತ್ತ ಗಮನಹರಿಸಲು ಸರ್ಕಾರಿ ಕರ್ತವ್ಯಗಳಿಂದ ಮುಕ್ತಿಗೊಳಿಸಬೇಕೆಂದು ಪಕ್ಷದ ವರಿಷ್ಠರ ಬಳಿ ವಿನಂತಿಸುತ್ತೇನೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಬುಧವಾರ ಹೇಳಿದ್ದಾರೆ.
ಮುಂಬೈ: ಮುಂಬರುವ ವಿಧಾನಸಭೆ ಚುನಾವಣೆಯತ್ತ ಗಮನಹರಿಸಲು ಸರ್ಕಾರಿ ಕರ್ತವ್ಯಗಳಿಂದ ಮುಕ್ತಿಗೊಳಿಸಬೇಕೆಂದು ಪಕ್ಷದ ವರಿಷ್ಠರ ಬಳಿ ವಿನಂತಿಸುತ್ತೇನೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಬುಧವಾರ ಹೇಳಿದ್ದಾರೆ.
ಮುಂಬೈನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 'ಮಹಾರಾಷ್ಟ್ರದಲ್ಲಿ ಅನುಭವಿಸಿದ ಸೋಲಿನ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತುಕೊಳ್ಳುತ್ತೇನೆ.
ಮುಂಬರುವ ವಿಧಾನಸಭಾ ಚುನಾವಣೆಯತ್ತ ಗಮನಕೊಡಲು ಮತ್ತು ಪಕ್ಷದಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಲು ನನ್ನನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಮುಕ್ತಿಗೊಳಿಸಿ ಎಂದು ವರಿಷ್ಠರಲ್ಲಿ ಮನವಿ ಮಾಡುತ್ತೇನೆ. ಹಿರಿಯ ನಾಯಕರನ್ನು ಶೀಘ್ರದಲ್ಲೇ ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸುತ್ತೇನೆ' ಎಂದರು.
ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನಡುವೆ ಸಮನ್ವಯದ ಸಮಸ್ಯೆಯಿದೆ. ಶೀಘ್ರದಲ್ಲೇ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಾಗುವುದು ಎಂದರು.