ಅಪುಲಿಯಾ: ಇಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಗೂ ಎರಡು ದಿನಗಳ ಮೊದಲು ಇಟಲಿ ಸಂಸತ್ತಿನಲ್ಲಿ ಪ್ರಾದೇಶಿಕ ಸ್ವಾಯತ್ತ ಅಧಿಕಾರದ ವಿಷಯವಾಗಿ ಸಂಸದರು ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಅಪುಲಿಯಾ: ಇಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಗೂ ಎರಡು ದಿನಗಳ ಮೊದಲು ಇಟಲಿ ಸಂಸತ್ತಿನಲ್ಲಿ ಪ್ರಾದೇಶಿಕ ಸ್ವಾಯತ್ತ ಅಧಿಕಾರದ ವಿಷಯವಾಗಿ ಸಂಸದರು ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಪ್ರಾದೇಶಿಕ ಸ್ವಾಯತ್ತ ಅಧಿಕಾರಗಳನ್ನು ವಿಸ್ತರಿಸುವ ಉದ್ದೇಶದ ವಿವಾದಾತ್ಮಕ ಕಾನೂನಿನ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ಗದ್ದಲ ಉಂಟಾಯಿತು.
ತಕ್ಷಣವೇ ಗಾರ್ಡ್‌ಗಳು ಪರಿಸ್ಥಿತಿಯನ್ನು ನಿಭಾಯಿಸಿದರು. ಈ ವೇಳೆ ಸಂಸದರೊಬ್ಬರು ಗಾಯಗೊಂಡರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇಟಲಿ ಮಾಧ್ಯಮಗಳು ವರದಿ ಮಾಡಿವೆ.
ಜಿ7 ಶೃಂಗಸಭೆ ನಡೆಯುವ ಎರಡು ದಿನಗಳ ಮುನ್ನ ಈ ಘಟನೆ ನಡೆದಿದೆ.
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಜೂನ್ 14 ರಂದು ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಯ ಅಪುಲಿಯಾ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೆರಳಿದ್ದಾರೆ.
ಅಭಿವೃದ್ಧಿಯಲ್ಲಿ ಹಿಂದುಳಿದ ದೇಶಗಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಈ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಮೋದಿ ಹೇಳಿದ್ದಾರೆ.