ತಿರುವನಂತಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇದೇ ಜೂನ್ 12ರಂದು ವಯನಾಡಿಗೆ ಭೇಟಿ ನೀಡಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಯ್‌ಬರೇಲಿ ಮತ್ತು ವಯನಾಡಿನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು.
ಇದೀಗ ಕಾಂಗ್ರೆಸ್‌ನ ಭದ್ರಕೋಟೆ ಎಂದೇ ಗುರುತಿಸಿಕೊಂಡಿರುವ ರಾಯ್‌ಬರೇಲಿ ಕ್ಷೇತ್ರದಿಂದಲೇ ಸಂಸದರಾಗಿ ಲೋಕಸಭೆಯಲ್ಲಿ ಪ್ರತಿನಿಧಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ವಯನಾಡು ಕ್ಷೇತ್ರವನ್ನು ರಾಹುಲ್ ಬಿಟ್ಟುಕೊಡುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಆನಿ ರಾಜಾ ಅವರ ವಿರುದ್ಧ ರಾಹುಲ್ 3,64,422 ಮತಗಳ ಅಂತರದಿಂದ ಭರ್ಜರಿ ಜಯ ಗಳಿಸಿದ್ದರು.
ಈ ಎಲ್ಲಾ ಬೆಳವಣಿಗೆಗಳ ನಡುವೆ ವಯನಾಡಿಗೆ ಭೇಟಿ ನೀಡುತ್ತಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.