ನವದೆಹಲಿ: ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಗೆ ಇಂದು (ಬುಧವಾರ) ಮತದಾನ ನಡೆಯಲಿದ್ದು, ತಪ್ಪದೆ ಪಾಲ್ಗೊಳ್ಳುವಂತೆ ಪಕ್ಷದ ಎಲ್ಲಾ ಸಂಸದರಿಗೆ ಕಾಂಗ್ರೆಸ್ ವಿಪ್ ಜಾರಿ ಮಾಡಿದೆ.
ನವದೆಹಲಿ: ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಗೆ ಇಂದು (ಬುಧವಾರ) ಮತದಾನ ನಡೆಯಲಿದ್ದು, ತಪ್ಪದೆ ಪಾಲ್ಗೊಳ್ಳುವಂತೆ ಪಕ್ಷದ ಎಲ್ಲಾ ಸಂಸದರಿಗೆ ಕಾಂಗ್ರೆಸ್ ವಿಪ್ ಜಾರಿ ಮಾಡಿದೆ.
18ನೇ ಲೋಕಸಭೆಯ ಮೊದಲ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಎನ್‌ಡಿಎ ತನ್ನ ಅಭ್ಯರ್ಥಿಯಾಗಿ ಬಿಜೆಪಿಯ ಓಂ ಬಿರ್ಲಾ ಅವರನ್ನು ಕಣಕ್ಕಿಳಿಸಿದೆ. 'ಇಂಡಿಯಾ' ಮೈತ್ರಿಕೂಟವು ಕೇರಳದ ಕಾಂಗ್ರೆಸ್ ಸಂಸದ ಕೋಡಿಕುನ್ನಿಲ್ ಸುರೇಶ್ ಅವರನ್ನು ಕಣಕ್ಕಿಳಿಸಿದೆ.
ಲೋಕಸಭೆ ಉಪಸಭಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಮಾತುಕತೆ ಮುರಿದುಬಿದ್ದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ರಾಜಸ್ಥಾನದ ಕೋಟಾ ಲೋಕಸಭಾ ಕ್ಷೇತ್ರದಿಂದ 3ನೇ ಬಾರಿಗೆ ಲೋಕಸಭಾ ಸದಸ್ಯರಾಗಿ ಬಿರ್ಲಾ ಆಯ್ಕೆಯಾಗಿದ್ದಾರೆ. ಇತ್ತ ಕೋಡಿಕುನ್ನಿಲ್ ಸುರೇಶ್ ಅವರು ಕೇರಳದಿಂದ 7ನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ.