ತಿರುವನಂತಪುರ: ಇಂದಿನಿAದ (ಜುಲೈ ೩೧ರಿಂದ) ಆಗಸ್ಟ್ ೨ರವರೆಗಿನ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪಿಎಸ್‌ಸಿ ಪ್ರಕಟಿಸಿದೆ.
ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಪಿಎಸ್‌ಸಿ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ, ಪೂರ್ವ ನಿಯೋಜಿತ ಸಂದರ್ಶನಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ವಯನಾಡಿನ ವಿಪತ್ತು ಪೀಡಿತ ಪ್ರದೇಶಗಳಿಂದ ಸಂದರ್ಶನಕ್ಕೆ ಹಾಜರಾಗಲು ಸಾಧ್ಯವಾಗದವರಿಗೆ ಪ್ರತ್ಯೇಕ ಸಂದರ್ಶನವನ್ನು ನಡೆಸಲಾಗುತ್ತದೆ ಎಂದು ತಿಳಿಸಲಾಗಿದೆ.