ನವದೆಹಲಿ: ದೆಹಲಿಯ ದಕ್ಷಿಣ ಭಾಗದಲ್ಲಿರುವ ಡಿಡಿಯು ಮಾರ್ಗದಲ್ಲಿರುವ 1,100 ಮರಗಳನ್ನು ಕತ್ತರಿಸುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ಬಿಜೆಪಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ನವದೆಹಲಿ: ದೆಹಲಿಯ ದಕ್ಷಿಣ ಭಾಗದಲ್ಲಿರುವ ಡಿಡಿಯು ಮಾರ್ಗದಲ್ಲಿರುವ 1,100 ಮರಗಳನ್ನು ಕತ್ತರಿಸುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ಬಿಜೆಪಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರಲ್ಲಿ ಕೆಲವರು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ಮುಖವಾಡ ಧರಿಸಿದ್ದರು.
ಸಂರಕ್ಷಿತ ಅರಣ್ಯ ಪ್ರದೇಶದಲ್ಲಿನ ಮರಗಳನ್ನು ಕಡಿಯುತ್ತಿರುವುದರ ಹಿಂದೆ ಲೆಫ್ಟಿನೆಂಟ್ ಗವರ್ನರ್ ಅವರು ಪ್ರತಿನಿಧಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
'ರಸ್ತೆ ಅಗಲೀಕರಣಕ್ಕಾಗಿ ದೆಹಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಲೆಫ್ಟಿನೆಂಟ್ ಗವರ್ನರ್ ಅವರ ಮೌಖಿಕ ಆದೇಶದ ಅನುಸಾರ ಮರಗಳನ್ನು ಕಡಿಯಲಾಗುತ್ತಿದೆ ಎಂದು ಎಎಪಿ ಆರೋಪಿಸಿದೆ.
ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪರಿಸರ ಸಚಿವ ಗೋಪಾಲ್ ರಾಯ್ ಅವರೇ ಮರ ಕತ್ತರಿಸಲು ಅನುಮತಿ ನೀಡಿದ್ದಾರೆ ಎಂದಿದೆ. ಆ ಮೂಲಕ ಎಎಪಿ ಹಾಗೂ ಲೆಫ್ಟಿನೆಂಟ್ ಗವರ್ನರ್ ನಡುವೆ ತಿವ್ರ ಮುಸುಕಿನ ಗುದ್ದಾಟ ನಡೆದಿದೆ.
ಈ ನಡುವೆ ದೆಹಲಿ ದಕ್ಷಿಣದ ಸಾತ್‌ಬರಿ ಬಳಿ 1,100 ಮರಗಳನ್ನು ಕತ್ತರಿಸುವುದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.