ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 5ರಂದು ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್-ಯುಜಿ) ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಇತರೆ ಅವ್ಯವಹಾರಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು (ಸೋಮವಾರ) ಆರಂಭಿಸಿದೆ.
ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 5ರಂದು ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್-ಯುಜಿ) ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಇತರೆ ಅವ್ಯವಹಾರಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು (ಸೋಮವಾರ) ಆರಂಭಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ, ಮನೋಜ್ ಮಿಶ್ರಾ ನೇತೃತ್ವದ ನ್ಯಾಯಪೀಠವು ಮೂರು ಡಜನ್‌ಗೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.
ನೀಟ್ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (ಎನ್‌ಟಿಎ) ಹಾಗೂ ಸಿಬಿಐ ನಡೆಸಿರುವ ತನಿಖಾ ವರದಿ ಕುರಿತಾದ ದಾಖಲೆಗಳನ್ನು ಜುಲೈ 10ರ (ಬುಧವಾರ) ಸಂಜೆ 5 ಗಂಟೆಯೊಳಗೆ ಸಲ್ಲಿಸುವಂತೆ ನ್ಯಾಯಪೀಠ ಆದೇಶಿಸಿದೆ. ಜತೆಗೆ, ಅರ್ಜಿಗಳ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ.
ನೀಟ್ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಜೂನ್ 23ರಂದು ಸಿಬಿಐ ತನಿಖೆ ಆರಂಭಿಸಿದ್ದು, ಪ್ರಕರಣ ಸಂಬಂಧ ಹಲವರನ್ನು ಬಂಧಿಸಿದೆ. ವಿವಾದದ ನಂತರ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (ಎನ್‌ಟಿಎ) ಪಾರದರ್ಶಕ, ಸುಗಮ, ನ್ಯಾಯಸಮ್ಮತವಾಗಿ ಪರೀಕ್ಷೆ ನಡೆಸಲು ಇಸ್ರೊದ ಮಾಜಿ ಅಧ್ಯಕ್ಷ ಡಾ.ಕೆ. ರಾಧಾಕೃಷ್ಣನ್, ಐಐಟಿ ಕಾನ್ಪುರದ ಬೋರ್ಡ್ ನಿರ್ದೇಶಕರನ್ನು ಒಳಗೊಂಡ ತಜ್ಞರ ಉನ್ನತ ಮಟ್ಟದ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ.
ಈ ಹಿಂದೆ ಜುಲೈ 6ರಂದು ನಡೆಸಲು ನಿರ್ಧರಿಸಿದ್ದ ನೀಟ್- ಯುಜಿ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಅಧಿಕಾರಿಗಳು ತಿಂಗಳ ಕೊನೆಯವರೆಗೂ ಮುಂದೂಡಿದ್ದಾರೆ. ಉದ್ದೇಶಿತ ಕೌನ್ಸೆಲಿಂಗ್‌ಗೆ ತಡೆ ನೀಡಲು ಸುಪ್ರೀಂಕೋರ್ಟ್ ಈ ಹಿಂದೆ ನಿರಾಕರಿಸಿತ್ತು. ನೀಟ್‌ನಲ್ಲಿ ಕೃಪಾಂಕ ಪಡೆದು ಉತ್ತಮ ರ‍್ಯಾಂಕ್ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರು ಪರೀಕ್ಷೆ ನಡೆಸಲು ನಿರ್ಧರಿಸಿದ್ದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಕ್ರಮಕ್ಕೆ ಸುಪ್ರೀಂಕೋರ್ಟ್ ಜೂನ್ 13ರಂದು ಒಪ್ಪಿಗೆ ಸೂಚಿಸಿತ್ತು.