ದರ್ಭಂಗಾ : ದರ್ಭಂಗಾ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಪರವಾಗಿ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ)-2024 ಬರೆಯುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ 12 ಜನರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.
ದರ್ಭಂಗಾ : ದರ್ಭಂಗಾ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಪರವಾಗಿ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ)-2024 ಬರೆಯುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ 12 ಜನರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಲಹೇರಿಯಾಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಒಂಬತ್ತು ಜನರನ್ನು ಬಂಧಿಸಿದ್ದರೆ, ಸಾದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಹಾಗೂ ಬಹದ್ದೂರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಬ್ಬರನ್ನು ಬಂಧಿಸಲಾಗಿದೆ ಎಂದು ದರ್ಭಂಗಾ ಪೊಲೀಸ್ ವರಿಷ್ಠಾಧಿಕಾರಿ ಜಗುನಾಥ ರೆಡ್ಡಿ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಬಯೊಮೆಟ್ರಿಕ್ ಬೆರಳಚ್ಚನ್ನು ಸ್ಕ್ಯಾನ್ ಮಾಡಿದ ಸಂದರ್ಭ, ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದಾರೆ ಎಂದಿದ್ದಾರೆ.
ಪರೀಕ್ಷಾ ಮೇಲ್ವಿಚಾರಕರು ನೀಡಿದ ದೂರಿನನ್ವಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆದಿದೆ. ಪರೀಕ್ಷೆಯನ್ನು ಬರೆಯಬೇಕಿದ್ದ ನೈಜ ಅಭ್ಯರ್ಥಿಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಬಂಧಿತರಿಗೆ ಅಂತರರಾಜ್ಯ ವಂಚಕರ ಜಾಲದ ಸಂಪರ್ಕವಿದೆಯೇ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.