ಗುವಾಹಟಿ: ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಕನಿಷ್ಠ 131 ಪ್ರಾಣಿಗಳು ಸಾವಿಗೀಡಾಗಿವೆ. 96 ಪ್ರಾಣಿಗಳನ್ನು ರಕ್ಷಿಸಲಾಗಿದೆ.
ಗುವಾಹಟಿ: ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಕನಿಷ್ಠ 131 ಪ್ರಾಣಿಗಳು ಸಾವಿಗೀಡಾಗಿವೆ. 96 ಪ್ರಾಣಿಗಳನ್ನು ರಕ್ಷಿಸಲಾಗಿದೆ.
ಮೃತಪಟ್ಟ ಪ್ರಾಣಿಗಳಲ್ಲಿ 6 ಘೇಂಡಾಮೃಗಗಳು ಹಾಗೂ 117 ಜಿಂಕೆಗಳು ಸೇರಿವೆ.
85 ಜಿಂಕೆಗಳು, 2 ಘೇಂಡಾಮೃಗಗಳು, ಎರಡು ಸಾಂಬಾರ ಸೇರಿ 96 ಪ್ರಾಣಿಗಳನ್ನು ಅರಣ್ಯಾಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಸದ್ಯ 25 ಪ್ರಾಣಿಗಳು ಚಿಕಿತ್ಸೆ ಪಡೆಯುತ್ತಿದ್ದು, 52 ಇನ್ನಿತರ ಪ್ರಾಣಿಗಳಿಗೆ ಚಿಕಿತ್ಸೆ ನೀಡಿ ಬಿಡುಗಡೆಗೊಳಿಸಲಾಗಿದೆ.