ಕೋಲ್ಕತ್ತ: 'ರಾಜಭವನಕ್ಕೆ ತೆರಳಲು ಭಯವಾಗುತ್ತದೆ ಎಂದು ಮಹಿಳೆಯೊಬ್ಬರು ನನ್ನ ಬಳಿ ಹೇಳಿಕೊಂಡಿದ್ದಾರೆ' ಎಂದಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಈ ವಿಷಯವಾಗಿ ಬೇರೆ ಯಾವ ಹೇಳಿಕೆಯನ್ನೂ ನೀಡಬಾರದು ಎಂದು ಆದೇಶಿಸಬೇಕು' ಎಂದು ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ಅವರು ಕಲ್ಕತ್ತಾ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸುವುದಾಗಿ ಕೋರ್ಟ್ ಹೇಳಿದೆ.