ಬಹರಾಂಪುರ: ಶಾಲಾ ಆವರಣದೊಳಗಿದ್ದ ಮರವೊಂದಕ್ಕೆ ಸಿಡಿಲು ಬಡಿದು ಕಾರಣ ಕನಿಷ್ಠ 15 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಪಶ್ಚಿಮ ಬಂಗಾಳದ ಮರ್ಷಿದಾಬಾದ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಹರಾಂಪುರ: ಶಾಲಾ ಆವರಣದೊಳಗಿದ್ದ ಮರವೊಂದಕ್ಕೆ ಸಿಡಿಲು ಬಡಿದು ಕಾರಣ ಕನಿಷ್ಠ 15 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಪಶ್ಚಿಮ ಬಂಗಾಳದ ಮರ್ಷಿದಾಬಾದ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡೊಮ್ಕಲ್‌ನಲ್ಲಿರುವ ಭಗೀರತಪುರ ಹೈಸ್ಕೂಲ್‌ನ ಕಟ್ಟಡದ ಸಮೀಪವೇ ಇರುವ ಮರಕ್ಕೆ ಸಿಡಿಲು ಬಡಿದಿದೆ.
ಶಾಲಾ ಸಿಬ್ಬಂದಿಗಳು, ಪೋಷಕರು ಹಾಗೂ ಸ್ಥಳೀಯ ನಿವಾಸಿಗಳು ತಕ್ಷಣವೇ ವಿದ್ಯಾರ್ಥಿಗಳನ್ನು ಡೊಮ್ಕಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ. ಆದರೆ ಅವರು ಆಘಾತಕ್ಕೊಳಗಾಗಿದ್ದಾರೆ. ಅವರ ಮೇಲೆ ನಿಗಾ ಇರಿಸಲಾಗಿದ್ದು, ಪರೀಕ್ಷೆ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.