ಲಖನೌ: ಉತ್ತರಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಬಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು 18 ಜನರು ಮೃತಪಟ್ಟಿದ್ದಾರೆ.
ಲಖನೌ: ಉತ್ತರಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಬಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು 18 ಜನರು ಮೃತಪಟ್ಟಿದ್ದಾರೆ.
ಆಗ್ರಾ-ಲಖನೌ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಬಲ್ ಡೆಕ್ಕರ್ ಬಸ್ ಎದುರಿನಿಂದ ಬರುತ್ತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಜರುಗಿದೆ.
ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇವರ ಪೈಕಿ ಹಲವರು ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಬಗ್ಗೆ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ಅರವಿಂದ್ ಕುಮಾರ್ ತಿಳಿಸಿದ್ದಾರೆ.