ಕಠ್ಮಂಡು: ನೇಪಾಳದ ಕಠ್ಮಂಡುವಿನ ತ್ರಿಭುವನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೌರ್ಯ ಏರ್‌ಲೈನ್ಸ್‌ನ ವಿಮಾನವೊಂದು ಟೇಕ್‌ಆಫ್ ವೇಳೆ ಪತನವಾಗಿದೆ.
ಕಠ್ಮಂಡು: ನೇಪಾಳದ ಕಠ್ಮಂಡುವಿನ ತ್ರಿಭುವನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೌರ್ಯ ಏರ್‌ಲೈನ್ಸ್‌ನ ವಿಮಾನವೊಂದು ಟೇಕ್‌ಆಫ್ ವೇಳೆ ಪತನವಾಗಿದೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ವಿಮಾನ ಪೋಖರಾಗೆ ತೆರಳುತ್ತಿತ್ತು, ಈ ವೇಳೆ ಅಪಘಾತ ಸಂಭವಿಸಿದೆ. ಟೇಕ್‌ಆಫ್ ವೇಳೆ ವಿಮಾನವು ರನ್‌ವೇಯಿಂದ ಹೊರಬಿದ್ದಿದ್ದು, ಬೆಂಕಿ ಹೊತ್ತಿಕೊಂಡಿದೆ.
ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೀಡುಬಿಟ್ಟಿದ್ದು, 18 ಮೃತದೇಹಗಳನ್ನು ಹೊರತೆಗೆದಿದ್ದಾರೆ.