ರಾಂಚಿ: ಜಾರ್ಖಂಡ್‌ನ ಸೆರೈಕೆಲಾ- ಖಾರ್ಸಾ ವಾನ್ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಮುಂಜಾನೆ ಮುಂಬೈ-ಹೌರಾ ರೈಲಿನ 18 ಬೋಗಿಗಳು ಹಳಿತಪ್ಪಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗ್ನೇಯ ರೈಲ್ವೆಯ ಚಕ್ರಧರಪುರ ವಿಭಾಗದ ಜಮ್‌ಶೆಡ್‌ಪುರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬರಬಂಬೂ ಬಳಿ ಮುಂಜಾನೆ 3.45 ಗಂಟೆಗೆ ಈ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
'ಮುಂಬೈ-ಹೌರಾ ರೈಲಿನ 18 ಬೋಗಿಗಳು ಹಳಿತಪ್ಪಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಅವಘಡದಲ್ಲಿ 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಬರಬಂಬೂನಲ್ಲಿಯೇ ಪ್ರಥಮ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚಕ್ರಧರಪುರಕ್ಕೆ ಕರೆದೊಯ್ಯಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ' ಎಂದು ಆಗ್ನೇಯ ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವಘಡ ಸಂಭವಿಸಿರುವ ಸ್ಥಳದ ಹತ್ತಿರದಲ್ಲಿಯೇ ಮತ್ತೊಂದು ಗೂಡ್ಸ್ ರೈಲು ಹಳಿತಪ್ಪಿದೆ. ಆದರೆ, ಎರಡು ಅಪಘಾತಗಳು ಏಕಕಾಲದಲ್ಲಿ ಸಂಭವಿಸಿವೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಆಗ್ನೇಯ ರೈಲ್ವೆ ವಕ್ತಾರ ಓಂ ಪ್ರಕಾಶ್ ಚರಣ್ ಹೇಳಿದ್ದಾರೆ.