ನವದೆಹಲಿ: ದೇಶದಲ್ಲಿ ಜುಲೈ 22ರವರೆಗೆ 13 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಅವುಗಳಲ್ಲಿ ಕರ್ನಾಟಕದಲ್ಲಿ 3 ಹಾಗೂ ಮಹಾರಾಷ್ಟ್ರದಲ್ಲಿ 10 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

ಇಂಟಿಗ್ರೇಟೆಡ್ ಡಿಸೀಸ್ ಸರ್ವೆಲೆನ್ಸ್ ಪ್ರೋಗ್ರಾಂ (IDSP) ವರದಿಯ ಪ್ರಕಾರ 2023, 2022 ಮತ್ತು 2021ರಲ್ಲಿ, ದೇಶದಲ್ಲಿ ಕ್ರಮವಾಗಿ 23, 2 ಹಾಗೂ 234 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದವು. 2018 ರಲ್ಲಿ 261 ಪ್ರಕರಣಗಳು ವರದಿಯಾಗಿದ್ದವು.
ಝೀಕಾ ವೈರಸ್ ಹರಡುವಿಕೆ ತಡೆಗಟ್ಟಲು ಕೇಂದ್ರ ಕ್ರಿಯಾ ಯೋಜನೆಯನ್ನು ರೂಪಿಸಿದೆ ಎಂದು ಪಟೇಲ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಅಲ್ಲದೇ ವೈರಾಣು ಹರಡದಂತೆ ತಡೆಯಲು ತೆಗೆದುಕೊಳ್ಳಬೇಕಾದ ವಿವಿಧ ಮುಂಜಾಗ್ರತಾ ಕ್ರಮಗಳ ಕುರಿತು ವಿವರವಾದ ಮಾರ್ಗದರ್ಶನವನ್ನೂ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಕೆಲ ಭಾಗಗಳಲ್ಲಿ ಝೀಕಾ ವೈರಸ್‌ನ ಕೆಲವು ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯವು ಜುಲೈ 3ರಂದು ದೇಶದಾದ್ಯಂತ ನಿರಂತರ ನಿಗಾ ವಹಿಸುವ ಅಗತ್ಯವಿದೆ ಎಂದು ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿತ್ತು.
ಝೀಕಾ ವೈರಸ್ ಪ್ರಕರಣಗಳು ಪತ್ತೆಯಾದ ಕೂಡಲೇ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮ (ಐಡಿಎಸ್‌ಪಿ) ಮತ್ತು ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕೇಂದ್ರಕ್ಕೆ (ಎನ್‌ವಿಬಿಡಿಸಿಪಿ) ತಕ್ಷಣವೇ ವರದಿ ಮಾಡುವಂತೆ ರಾಜ್ಯಗಳಿಗೆ ಸೂಚಿಸಿತ್ತು.