HEALTH TIPS

ಜುಲೈ 22ರಿಂದ ಸಂಸತ್ ಅಧಿವೇಶನ; ರಾಷ್ಟ್ರೀಕೃತ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಸಿದ್ಧತೆ

         ವದೆಹಲಿ: ಇದೇ 22ರಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಬ್ಯಾಂಕಿಂಗ್ ವಲಯದ ಸುಧಾರಣೆಗಾಗಿ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949ಕ್ಕೆ ತಿದ್ದುಪಡಿ ಸಂಬಂಧ ಮಸೂದೆ ಮಂಡಿಸುವ ಸಾಧ್ಯತೆ ಇದೆ.

         ಅಲ್ಲದೆ, ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸಲು ಸರ್ಕಾರವು, ಬ್ಯಾಂಕಿಂಗ್ ಕಂಪನಿಗಳ ಕಾಯ್ದೆ 1970 ಮತ್ತು 1980ರ ಕಾಯ್ದೆಯನ್ನು (ಸ್ವಾಧೀನ ಮತ್ತು ವರ್ಗಾವಣೆ) ತಿದ್ದುಪಡಿ ಮಸೂದೆ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

            ಈ ಎರಡು ಕಾಯ್ದೆಗಳ ಅಡಿ ಬ್ಯಾಂಕ್‌ಗಳನ್ನು ಎರಡು ಹಂತದಲ್ಲಿ ರಾಷ್ಟ್ರೀಕರಣಗೊಳಿಸಲಾಗಿತ್ತು. ಬ್ಯಾಂಕ್‌ಗಳ ಖಾಸಗೀಕರಣಕ್ಕಾಗಿ ಈ ಎರಡು ಕಾಯ್ದೆಗಳನ್ನು ತಿದ್ದುಪಡಿ ಮಾಡಬೇಕಿದೆ ಎಂದು ಹೇಳಿವೆ.

              ತಿದ್ದುಪಡಿಗೆ ಸಂಸತ್ತು ಅನುಮೋದನೆ ನೀಡಿದರೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ಸರ್ಕಾರವು ತನ್ನ ಹೂಡಿಕೆಯನ್ನು ಶೇ 51ಕ್ಕಿಂತಲೂ ತಗ್ಗಿಸಿಕೊಳ್ಳಬಹುದು. ಅಲ್ಲದೆ, ಬ್ಯಾಂಕ್‌ಗಳ ಆಡಳಿತ ಸುಧಾರಣೆ ಜೊತೆಗೆ ಹೂಡಿಕೆದಾರರ ರಕ್ಷಣೆಯನ್ನೂ ಹೆಚ್ಚಿಸಬಹುದು ಎಂದು ಮೂಲಗಳು ಹೇಳಿವೆ.

                ಈ ಎರಡೂ ಮಸೂದೆಗಳನ್ನು 2021ರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೇ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿತ್ತು. ಆದರೆ, ಆಗ ಸಾಧ್ಯವಾಗಿರಲಿಲ್ಲ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries