ನವದೆಹಲಿ: 'ನಾಗರಿಕ ಹಣಕಾಸು ಸೈಬರ್ ವಂಚನೆ ವರದಿ ಮತ್ತು ನಿರ್ವಹಣಾ ವ್ಯವಸ್ಥೆ' ಮೂಲಕ 7.6 ಲಕ್ಷಕ್ಕೂ ಹೆಚ್ಚು ಸೈಬರ್ ಪ್ರಕರಣಗಳಲ್ಲಿ ₹ 2,400 ಕೋಟಿ ವಂಚನೆಯಾಗುವುದನ್ನು ತಡೆಯಲಾಗಿದೆ ಎಂದು ಗೃಹ ಸಚಿವಾಲಯ ರಾಜ್ಯಸಭೆಗೆ ತಿಳಿಸಿದೆ.
ನವದೆಹಲಿ: 'ನಾಗರಿಕ ಹಣಕಾಸು ಸೈಬರ್ ವಂಚನೆ ವರದಿ ಮತ್ತು ನಿರ್ವಹಣಾ ವ್ಯವಸ್ಥೆ' ಮೂಲಕ 7.6 ಲಕ್ಷಕ್ಕೂ ಹೆಚ್ಚು ಸೈಬರ್ ಪ್ರಕರಣಗಳಲ್ಲಿ ₹ 2,400 ಕೋಟಿ ವಂಚನೆಯಾಗುವುದನ್ನು ತಡೆಯಲಾಗಿದೆ ಎಂದು ಗೃಹ ಸಚಿವಾಲಯ ರಾಜ್ಯಸಭೆಗೆ ತಿಳಿಸಿದೆ.
ಹಣಕಾಸು ವಂಚನೆಗಳ ಕುರಿತು ತಕ್ಷಣದ ವರದಿ ಮತ್ತು ವಂಚಕರು ಹಣವನ್ನು ಪೋಲು ಮಾಡುವುದನ್ನು ತಡೆಯುವ ಉದ್ದೇಶದಿಂದ, ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ 14ಸಿ ಅಡಿಯಲ್ಲಿ ಈ ವ್ಯವಸ್ಥೆಯನ್ನು 2021ರಲ್ಲಿ ಸ್ಥಾಪಿಸಲಾಗಿತ್ತು ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಲಿಖಿತ ಉತ್ತರ ನೀಡಿದ್ದಾರೆ.