ನವ್ಸಾರಿ: ಗುಜರಾತ್‌ನ ದಕ್ಷಿಣ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಲವು ಗ್ರಾಮಗಳ ಸುಮಾರು 2,500 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ನವ್ಸಾರಿ: ಗುಜರಾತ್‌ನ ದಕ್ಷಿಣ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಲವು ಗ್ರಾಮಗಳ ಸುಮಾರು 2,500 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
'ಜಿಲ್ಲೆಯಲ್ಲಿ ಹರಿಯುವ ಪೂರ್ಣಾ ನದಿಯು, ಭಾರಿ ಮಳೆಯಿಂದಾಗಿ ಅಪಾಯದ ಮಟ್ಟ ಮೀರಿದೆ.
ಜಲಾವೃತವಾಗಿರುವ ಕಾರಣ ಜಿಲ್ಲೆಯ 4 ಮುಖ್ಯ ರಸ್ತೆಗಳು, 70 ಆಂತರಿಕ ಸಂಪರ್ಕ ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದೂ ಹೇಳಿದ್ದಾರೆ.
ತಾಪಿ ಜಿಲ್ಲೆಯ ವಲೊದ ತಾಲ್ಲೂಕಿನ ಗ್ರಾಮಗಳಿಂದ 500 ಜನರನ್ನು ಸ್ಥಳಾಂತರಿಸಲಾಗಿದೆ. ಜಿಲ್ಲೆಯ 113 ಆಂತರಿಕ ಸಂಪರ್ಕ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ದಳ ತಿಳಿಸಿದೆ.
ಗುಜರಾತ್‌ನ ದಕ್ಷಿಣ ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರವೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.