HEALTH TIPS

ಮಾನನಷ್ಟ ಪ್ರಕರಣ: ಜುಲೈ 26ಕ್ಕೆ ಖುದ್ದಾಗಿ ಹಾಜರಾಗಲು ರಾಹುಲ್‌ಗೆ ಕೋರ್ಟ್ ಸೂಚನೆ

            ಸುಲ್ತಾನ್‌ಪುರ: ಮಾನನಷ್ಟ ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಗೆ ಜುಲೈ 26ರಂದು ಖುದ್ದಾಗಿ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಇಲ್ಲಿನ ಸಂಸದರ-ಶಾಸಕರ ನ್ಯಾಯಾಲಯ ಸೂಚಿಸಿದೆ.

            ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ್ದಾರೆ ಎನ್ನಲಾದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ರಾಹುಲ್ ಗಾಂಧಿ ಅವರ ವಿರುದ್ಧ 2018ರಲ್ಲಿ ಮಾನನಷ್ಟ ಪ್ರಕರಣ ದಾಖಲಾಗಿದೆ.

ಈ ಪ್ರಕರಣದ ಕುರಿತು ಮಂಗಳವಾರವೇ ರಾಹುಲ್ ಅವರು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಸಂಸತ್ತಿನ ಕಲಾಪದಿಂದಾಗಿ ಅವರು ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ನ್ಯಾಯಾಲಯಕ್ಕೆ ಹಾಜರಾದ ಅವರ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ, ಈ ಪ್ರಕರಣದ ವಿಚಾರಣೆಗೆ ಮುಂದಿನ ದಿನಾಂಕ ನಿಗದಿಪಡಿಸಬೇಕು ಎಂದು ಕೋರಿದರು.

             ಇದಕ್ಕೆ ಸಮ್ಮತಿಸಿದ ನ್ಯಾಯಾಧೀಶ ಶುಭಮ್ ವರ್ಮಾ ಅವರು, ಜುಲೈ 26ರಂದು ರಾಹುಲ್ ಖುದ್ದಾಗಿ ಹಾಜರಾಗಬೇಕು ಎಂದು ಹೇಳಿದರು.

               ಈ ಪ್ರಕರಣದ ವಿಚಾರಣೆಗಾಗಿ ರಾಹುಲ್ ಗಾಂಧಿ 'ಭಾರತ್ ಜೋಡೊ ನ್ಯಾಯ ಯಾತ್ರೆ'ಯನ್ನು ಫೆಬ್ರುವರಿ 20ರಂದು ಒಂದು ದಿನದ ಮಟ್ಟಿಗೆ ನಿಲ್ಲಿಸಿ, ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆಗ ಅವರಿಗೆ ಜಾಮೀನು ಸಿಕ್ಕಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries