HEALTH TIPS

ಮುಂಬೈ | ₹29,000 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

          ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾಣಿಜ್ಯ ನಗರಿ ಮುಂಬೈಯ ರಸ್ತೆ, ರೈಲ್ವೆ, ಬಂದರು ವಲಯಗಳಲ್ಲಿ ₹29,000 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ ನೆರವೇರಿಸಿದ್ದಾರೆ.

        ಈ ವೇಳೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, 'ಮಹಾರಾಷ್ಟ್ರವನ್ನು ವಿಶ್ವದ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಮತ್ತು ಮುಂಬೈಯನ್ನು ಜಾಗತಿಕ 'ಫಿನ್‌ಟೆಕ್' ರಾಜಧಾನಿಯನ್ನಾಗಿ ಮಾಡುವುದು ನನ್ನ ಗುರಿಯಾಗಿದೆ' ಎಂದು ಹೇಳಿದ್ದಾರೆ.

           ಅವಳಿ ಸುರಂಗ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದರಲ್ಲಿ ₹16,600 ಕೋಟಿ ಮೌಲ್ಯದ ಥಾಣೆ-ಬೊರಿವಲಿ ಸುರಂಗ ಮಾರ್ಗದ ಯೋಜನೆ ಹಾಗೂ ₹6,300 ಕೋಟಿ ಮೌಲ್ಯದ ಗೋರೆಗಾಂವ್-ಮುಲುಂಡ್ ಲಿಂಕ್ ರೋಡ್ (ಜಿಎಂಎಲ್‌ಆರ್) ಸುರಂಗ ಯೋಜನೆ ಒಳಗೊಂಡಿದೆ.

             ₹5,600 ಕೋಟಿ ಮೌಲ್ಯದ 'ಮುಖ್ಯಮಂತ್ರಿ ಯುವ ಕಾರ್ಯ ಪ್ರಶಿಕ್ಷಣ ಯೋಜನೆ'ಗೂ ಪ್ರಧಾನಿ ಚಾಲನೆ ನೀಡಿದ್ದಾರೆ.

               ಲೋಕಮಾನ್ಯ ತಿಲಕ್ ಟರ್ಮಿನಸ್‌ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಲ್ಲಿ ಹೊಸ ಫ್ಲ್ಯಾಟ್‌ಫಾರ್ಮ್ ಅನ್ನು ಪ್ರಧಾನಿ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries