HEALTH TIPS

ಪಂಜಾಬ್‌ನ ಬಟಾಲಾದಲ್ಲಿ 2 ಗುಂಪುಗಳ ನಡುವೆ ಗುಂಡಿನ ದಾಳಿ: ನಾಲ್ವರ ಸಾವು

             ಚಂಡೀಗಢ: ಪಂಜಾಬ್‌ನ ಗುರುದಾಸಪುರ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಪರಸ್ವರ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

             ಭಾನುವಾರ ರಾತ್ರಿ ಬಟಾಲಾದ ವಿತ್ವಾನ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎರಡು ಗುಂಪುಗಳಲ್ಲಿ ಒಟ್ಟು 13 ಜನರಿದ್ದರು. ಹಳೆ ವೈಷಮ್ಯ ಘಟನೆಗೆ ಕಾರಣ ಎನ್ನಲಾಗಿದೆ.

              ಗುಂಡಿನ ದಾಳಿಯಲ್ಲಿ ಪ್ರತಿ ಗುಂಪಿನಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

               ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries