HEALTH TIPS

ವಯನಾಡು ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆ, ಸಿಎಂ ಪಿಣರಾಯಿ ಜತೆ ಮಾತನಾಡಿ ಪ್ರಧಾನಿ ಮೋದಿ ಚರ್ಚೆ, ನೆರವಿನ ಭರವಸೆ

ವಯನಾಡ್: ಮಂಗಳವಾರ ಕೇರಳದ  ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಮಕ್ಕಳು ಸೇರಿದಂತೆ 30 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರಲ್ಲಿ ಜಿಲ್ಲೆಯ ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದರೆ, ನೇಪಾಳಿ ಕುಟುಂಬದ ಒಂದು ವರ್ಷದ ಮಗು ತೊಂಡರ್ನಾಡ್ ಗ್ರಾಮದಲ್ಲಿ ಮೃತರಾಗಿದ್ದಾರೆ ಎಂದು ವಯನಾಡ್ ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪೋತುಕಲ್ ಗ್ರಾಮದ ಬಳಿಯ ನದಿಯ ದಡದಿಂದ ಐದು ವರ್ಷದ ಮಗು ಸೇರಿದಂತೆ ಮೂರು ಶವಗಳನ್ನು ಹೊರತೆಗೆಯಲಾಗಿದೆ. ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾಗಿ ಸಂಪರ್ಕ ಕಡಿತಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವಯನಾಡ್ ಜಿಲ್ಲಾಧಿಕಾರಿ ಮೇಘಶ್ರೀ ಡಿ ಆರ್ ಹೇಳಿದ್ದಾರೆ.

ಸರ್ಕಾರಿ ಸಂಸ್ಥೆಗಳ ಜೊತೆಗೆ ಸ್ವಯಂಸೇವಕರು ಮತ್ತು ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಕರಿಸುತ್ತಿದ್ದಾರೆ. ಕರಮಂತೋಡು ನದಿಯ ಬಾಣಾಸುರ ಸಾಗರ ಅಣೆಕಟ್ಟಿನ ಶೆಟರ್ ನ್ನು ತೆರೆಯಲಾಗಿದ್ದು, ಕೆಳಭಾಗ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಪೋತುಕಲ್ ಗ್ರಾಮದ ಬಳಿಯ ನದಿಯ ದಡದಿಂದ ಐದು ವರ್ಷದ ಮಗು ಸೇರಿದಂತೆ ಮೂರು ಶವಗಳನ್ನು ಹೊರತೆಗೆಯಲಾಗಿದೆ. ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾಗಿ ಸಂಪರ್ಕ ಕಡಿತಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವಯನಾಡ್ ಜಿಲ್ಲಾಧಿಕಾರಿ ಮೇಘಶ್ರೀ ಡಿ ಆರ್ ಹೇಳಿದ್ದಾರೆ.

ಸರ್ಕಾರಿ ಸಂಸ್ಥೆಗಳ ಜೊತೆಗೆ ಸ್ವಯಂಸೇವಕರು ಮತ್ತು ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಕರಿಸುತ್ತಿದ್ದಾರೆ. ಕರಮಂತೋಡು ನದಿಯ ಬಾಣಾಸುರ ಸಾಗರ ಅಣೆಕಟ್ಟಿನ ಶೆಟರ್ ನ್ನು ತೆರೆಯಲಾಗಿದ್ದು, ಕೆಳಭಾಗ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ವೀಡಿಯೊ ಸಂದೇಶದಲ್ಲಿ, ಯುಡಿಎಫ್ ಶಾಸಕ ಟಿ ಸಿದ್ದಿಕ್, ಮುಂಡಕ್ಕೈ ಪ್ರದೇಶದಿಂದ ಜನರನ್ನು ವಿಮಾನಗಳ ಮೂಲಕ ಸ್ಥಳಾಂತರಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದರು. ಪ್ರಸ್ತುತ, ಭೂಕುಸಿತದಲ್ಲಿ ಕಾಣೆಯಾದ ಮತ್ತು ಮೃತಪಟ್ಟವರ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇಲ್ಲ. ಹಲವು ಪ್ರದೇಶಗಳು ಸಂಪರ್ಕ ಕಡಿತಗೊಂಡಿವೆ. NDRF ಸಿಬ್ಬಂದಿ ಸ್ಥಳವನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ ಎಂದರು.

ವಯನಾಡ್ ಭೂಕುಸಿತ ಪ್ರದೇಶದಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ವಿವಿಧ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಿಲುಕಿರುವ ಭೀತಿಯ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಹೇಳಿದ್ದಾರೆ.

ಕಾರ್ಯಾಚರಣೆಯನ್ನು ಸಮನ್ವಯಗೊಳಿಸಲಾಗುವುದು ಮತ್ತು ರಕ್ಷಣಾ ಚಟುವಟಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಗುಡ್ಡಗಾಡು ಜಿಲ್ಲೆಗೆ ತಲುಪಲಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಕಚೇರಿಯಿಂದ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಶೀಘ್ರದಲ್ಲೇ ಸೂಲೂರಿನಿಂದ ವಯನಾಡ್‌ಗೆ ತೆರಳಲಿವೆ.

ವಯನಾಡ್ ಜಿಲ್ಲೆಯಲ್ಲಿ ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಅನಾಹುತಗಳ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ -- ರಾಷ್ಟ್ರೀಯ ಆರೋಗ್ಯ ಮಿಷನ್ - ನಿಯಂತ್ರಣ ಕೊಠಡಿಯನ್ನು ತೆರೆದಿದೆ. ತುರ್ತು ಸಹಾಯದ ಅಗತ್ಯವಿರುವವರು ಈ ಎರಡು ಸಂಖ್ಯೆಗಳ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದು -- 9656938689 ಮತ್ತು 8086010833 -- ಪ್ರಕಟಣೆ ತಿಳಿಸಿದೆ.

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (KSDMA) ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದ್ದು, ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ವಯನಾಡ್‌ಗೆ ತೆರಳುತ್ತಿದೆ.


ಕೆಎಸ್‌ಡಿಎಂಎ ಫೇಸ್‌ಬುಕ್ ಪೋಸ್ಟ್‌ನ ಪ್ರಕಾರ, ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಲು ವಯನಾಡ್‌ಗೆ ತೆರಳಲು ಸೂಚನೆ ನೀಡಲಾಗಿದೆ. ಹಲವಾರು ಕುಟುಂಬಗಳನ್ನು ವಿವಿಧ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ಅಧಿಕಾರಿಗಳ ಪ್ರಕಾರ, ಭೂಕುಸಿತದ ಹಿನ್ನೆಲೆಯಲ್ಲಿ ಹಲವಾರು ಕುಟುಂಬಗಳನ್ನು ವಿವಿಧ ಶಿಬಿರಗಳಿಗೆ ಅಥವಾ ಅವರ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸಲಾಗಿದೆ. ಕಣ್ಣೂರು ರಕ್ಷಣಾ ಡಿಕ್ಯೂರಿಟಿ ಕಾರ್ಪೊರೇಷನ್‌ಗಳ ಎರಡು ತಂಡಗಳಿಗೆ ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಲು ವಯನಾಡ್‌ಗೆ ತೆರಳಲು ಸೂಚನೆ ನೀಡಲಾಗಿದೆ.

ಸಂತ್ರಸ್ತ ಪ್ರದೇಶಗಳ ಸ್ಥಳೀಯರು ಹೇಳುವಂತೆ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.

ಕೇಂದ್ರದಿಂದ ಎಲ್ಲಾ ರೀತಿಯ ನೆರವು: ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ವಯನಾಡಿನ ಕೆಲವು ಭಾಗಗಳಲ್ಲಿ ಭೂಕುಸಿತದಿಂದ ಹಲವರು ಸಂಕಷ್ಟಕ್ಕೆ ಸಿಲುಕಿರುವ ವಿಷಯ ಕೇಳಿದೆ. ಕುಟುಂಬಸ್ಥರನ್ನು, ತಮ್ಮವರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಎಲ್ಲಾ ರೀತಿಯಲ್ಲಿಯೂ ನೆರವು ಒದಗಿಸಲಿದೆ. ಪ್ರಸ್ತುತ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತೇನೆ ಎಂದಿದ್ದಾರೆ.


ಪ್ರಧಾನಿ ಮೋದಿ ಸುರೇಶ್​ ಗೋಪಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಬಳಿಯೂ ಮಾತನಾಡಿದ್ದು, ಬಿಜೆಪಿ ಕಾರ್ಯಕರ್ತರನ್ನು ಕಳುಹಿಸಿ ಅವರಿಗೆ ಬೇಕಾದ ನೆರವು ಒದಗಿಸುವಂತೆ ಕೇಳಿದ್ದಾರೆ. ಸಚಿವ ಜಾರ್ಜ್​ ಅವರ ಬಳಿಯೂ ಮಾತನಾಡಿದ್ದಾರೆ.

ವಿರೋಧ ಪಕ್ಷದ ನಾಯಕ ಮತ್ತು ವಯನಾಡ್‌ನ ಮಾಜಿ ಲೋಕಸಭಾ ಸಂಸದ ರಾಹುಲ್ ಗಾಂಧಿ, ವಯನಾಡಿಗೆ ಸಾಧ್ಯವಿರುವ ಎಲ್ಲ ನೆರವು ಕೋರಲು ಕೇಂದ್ರ ಸಚಿವರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ. ವಯನಾಡಿನ ಮೆಪ್ಪಾಡಿ ಬಳಿ ಸಂಭವಿಸಿದ ಭಾರಿ ಭೂಕುಸಿತದಿಂದ ನಾನು ತೀವ್ರವಾಗಿ ನೊಂದಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಸಹಾಯವಾಣಿ: ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಚುರಲಮಲದಿಂದ ಮುಂಡಕ್ಕೈಗೆ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿ ಹೋಗಿದ್ದು, ಮುಂಡಕ್ಕೈಗೆ ಸಂಪರ್ಕ ಕಡಿತಗೊಂಡಿದೆ.

ಮಾಹಿತಿಯ ಪ್ರಕಾರ , ಭಾರೀ ಮಳೆಯ ನಂತರ ವಯನಾಡಿನಲ್ಲಿ ಭೂಕುಸಿತ ಸಂಭವಿಸಿದೆ. ಆರೋಗ್ಯ ಇಲಾಖೆ- ರಾಷ್ಟ್ರೀಯ ಆರೋಗ್ಯ ಮಿಷನ್ ತುರ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ತೆರೆದಿದೆ ಮತ್ತು ಸಹಾಯವಾಣಿ ಸಂಖ್ಯೆಗಳನ್ನು 9656938689 ಮತ್ತು 8086010833 ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries