ಶಿಮ್ಲಾ/ಮನಾಲಿ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-3ರಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಶಿಮ್ಲಾ/ಮನಾಲಿ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-3ರಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಬುಧವಾರ ಮೇಘಸ್ಪೋಟ ಸಂಭವಿಸಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ತೀರಾ ಅಗತ್ಯವಿದ್ದರೆ ಮಾತ್ರ ಜಾಗರೂಕತೆಯಿಂದ ಪ್ರಯಾಣಿಸಿ, ಮಾರ್ಗದಲ್ಲಿ ಸಂಭವನೀಯ ಅಪಾಯದ ಬಗ್ಗೆ ಜಾಗೃತರಾಗಿರಿ ಎಂದು ಸಾರ್ವಜನಿಕರಿಗೆ ಪ್ರಕಟಣೆ ಹೊರಡಿಸಲಾಗಿದೆ.
ಸ್ಥಳೀಯ ಹವಾಮಾನ ಇಲಾಖೆ ರಾಜ್ಯದಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗುವ ಸಂಭವ ಇರುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕಳೆದ ಜೂನ್‌ನಿಂದ ಈವರೆಗೆ ರಾಜ್ಯದಲ್ಲಿ ಮಳೆ ಸಂಬಂಧಿ ಅವಘಡಗಳಿಂದ 49 ಜನ ಮೃತಪಟ್ಟಿದ್ದು, ₹389 ಕೋಟಿ ನಷ್ಟವಾಗಿದೆ ಎಂದು ತುರ್ತು ಕಾರ್ಯಾಚರಣೆ ಕೇಂದ್ರ ಹೇಳಿದೆ.