HEALTH TIPS

3ನೇ ಅವಧಿಗೆ ಕಾಂಗ್ರೆಸ್ಸೇತರ ಪ್ರಧಾನಿ: ವಿಪಕ್ಷಗಳಿಗೆ ಅಸಮಾಧಾನ ಎಂದ ಮೋದಿ

          ವದೆಹಲಿ: ಮೊದಲ ಬಾರಿಗೆ ಕಾಂಗ್ರೆಸ್ಸೇತರ ನಾಯಕರೊಬ್ಬರು ಮೂರನೇ ಅವಧಿಗೆ ಪ್ರಧಾನಿಯಾಗಿರುವುದು ಪ್ರತಿಪಕ್ಷಗಳ ನಿರಾಶೆ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.

            ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಸದಸ್ಯರೊಂದಿಗೆ ಸದನದಲ್ಲಿ ನಡೆದುಕೊಳ್ಳುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

            ಸದಸ್ಯರು ಸಂಸದೀಯ ನಿಯಮಗಳನ್ನು ಅನುಸರಿಸಬೇಕು. ಹಿರಿಯ ಸದಸ್ಯರ ಅನುಭವವನ್ನು ಪಡೆದುಕೊಳ್ಳಬೇಕು ಎಂದು ತಿಳಿರುವುದಾಗಿ ಮೂಲಗಳು ತಿಳಿಸಿವೆ.

               ಮಾಧ್ಯಮಗಳ ಮುಂದೆ ಯಾವುದೇ ವಿಷಯಗಳ ಬಗ್ಗೆ ಹೇಳಿಕೆ ನೀಡುವ ಮೊದಲು ಆ ವಿಷಯಗಳ ಮಾಹಿತಿ ತಿಳಿದುಕೊಳ್ಳಬೇಕು. ತಮ್ಮ ಕ್ಷೇತ್ರಗಳ ಜನರೊಂದಿಗೆ ಸದಾ ಸಂಪರ್ಕದಲ್ಲಿ ಇರುವ ಮೂಲಕ ಮತದಾರರು ನೀಡಿದ ಬೆಂಬಲಕ್ಕೆ ಅವರಿಗೆ ಧನ್ಯವಾದ ಸಲ್ಲಿಸುವಂತೆ ಮೋದಿ ಸಲಹೆ ನೀಡಿದ್ದಾರೆ.

              ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸಂಸದರಿಗೆ ಸಂಸತ್ತಿನ ವಿಷಯಗಳ ಕುರಿತು ಅಧ್ಯಯನ ಮಾಡಲು, ನಿಯಮಿತವಾಗಿ ಸಂಸತ್ತಿಗೆ ಹಾಜರಾಗಲು ಮತ್ತು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿಯಾಗಿ ಪ್ರಸ್ತಾಪಿಸುವಂತೆ ಮೋದಿ ಸೂಚಿಸಿರುವುದಾಗಿ ತಿಳಿಸಿದ್ದಾರೆ.

               ಮೂರನೇ ಅವಧಿಗೆ ಅಧಿಕಾರಕ್ಕೆ ಬಂದಿರುವುದಕ್ಕೆ ಎನ್‌ಡಿಎ ಸದಸ್ಯರಿಗೆ ಮೋದಿ ಅಭಿನಂದಿಸಿದ್ದಾರೆ ಎಂದು ರಿಜಿಜು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries